ಕೆ.ಆರ್.ಪೇಟೆ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಅನುಷ್ಟಾನದಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡುವಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ನಡೆದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಗೃಹಲಕ್ಷ್ಮಿ ಯೋಜನೆಯಲ್ಲಿ ತಾಲ್ಲೂಕಿನ ಹಲವಾರು ಮಂದಿಗೆ ಹಣವು ಡಿಬಿಟಿ ಮೂಲಕ ಸರಿಯಾಗಿ ಪಾವತಿಯಾಗುತ್ತಿಲ್ಲ ಎಂಬ ದೂರು ಇದೆ. ಮನೆಯ ಯಜಮಾನತಿ ನಿಧನರಾದೊಡನೆ ಆ ಕುಟುಂಬದ ಹೆಣ್ಣು ಮಗಳಿಗೆ ಗೃಹಲಕ್ಷ್ಮೀ ಹಣವು ಸಿಗುವಂತೆ ಸೂಕ್ತ ಕ್ರಮ ವಹಿಸಬೇಕು’ ಎಂದು ಸಿಡಿಪಿಒಗೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸುಷ್ಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸಿಡಿಪಿಒ ಪದ್ಮಾ, ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ, ತಾಲ್ಲೂಕು ಆಹಾರ ಶಿರಸ್ತೇದಾರ್ ವಿನೋದ್, ಜಿಲ್ಲಾ ಉದ್ಯೋಗಾಧಿಕಾರಿ ಕುಸುಮ ವರದಿ ಮಂಡಿಸಿದರು. ಸಭೆಯಲ್ಲಿ ಸದಸ್ಯರಾದ ಸಿ.ಆರ್.ಪಿ.ಕುಮಾರ್, ಬೂಕನಕೆರೆ ರೂಪಾ, ಬೊಮ್ಮೇನಹಳ್ಳಿ ಲತಾ, ಕನಕದಾಸನಗರ ಶಿವಮ್ಮ, ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಸಿಂಗನಹಳ್ಳಿ ಗೋಪಾಲ್, ಬಂಡಿಹೊಳೆ ಯೋಗೇಶ್, ಗೋವಿಂದನಹಳ್ಳಿ ಶ್ಯಾಮಣ್ಣ, ಬೂಕನಕೆರೆ ಬಿ.ಸಿ.ಮಾಧು, ದೊಡ್ಡತಾರಹಳ್ಳಿ ಸೋಮಶೇಖರ್, ಹಾಫೀಜ್ ಉಲ್ಲಾ, ಯಗಚಗುಪ್ಪೆ ಶಿವಲಿಂಗಪ್ಪ, ಗ್ಯಾರಂಟಿ ವಿಷಯ ನಿರ್ವಾಹಕಿ ಚೈತ್ರ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.