ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಂಗಪಟ್ಟಣ | ಪರಿಹಾರ ಕೇಂದ್ರ ತೆರೆಯಲು ಸಿದ್ಧತೆ: ಡಿಸಿ

Last Updated 10 ಆಗಸ್ಟ್ 2020, 12:28 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ‘ಕಾವೇರಿ ನದಿಯಲ್ಲಿ ಪ್ರವಾಹ ಮತ್ತಷ್ಟು ಹೆಚ್ಚಿದರೆ ಅಗತ್ಯ ಇರುವ ಕಡೆ ಪರಿಹಾರ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್‌ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ಗೌತಮ ಕ್ಷೇತ್ರ ದ್ವೀಪ, ವೆಲ್ಲೆಸ್ಲಿ ಸೇತುವೆ, ಕಾವೇರಿಪುರ ಹಾಗೂ ನಿಮಿಷಾಂಬಾ ದೇವಾಲಯ ಬಳಿಗೆ ಸೋಮವಾರ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಅವರು ಮಾತನಾಡಿದರು.

‘ನಡುಗಡ್ಡೆಯಲ್ಲಿರುವಗೌತಮ ಕ್ಷೇತ್ರದ ಗಜಾನನ ಸ್ವಾಮೀಜಿ ಸುರಕ್ಷಿತವಾಗಿದ್ದಾರೆ. ನದಿ ತೀರದ ಜನರು ಹಾಗೂ ಮೀನುಗಾರರು ನೀರಿಗೆ ಇಳಿಯದಂತೆ ನೋಡಿಕೊಳ್ಳಬೇಕು. ಪ್ರವಾಹ ಹೆಚ್ಚಿದರೆ ಅವರನ್ನು ತಕ್ಷಣ ಸ್ಥಳಾಂತರಿಸಬೇಕು. ದೋಣಿ, ಈಜುಗಾರರು ಸದಾ ಸಿದ್ಧರಿರಬೇಕು’ ಎಂದು ತಿಳಿಸಿದರು.

‘ತಾಲ್ಲೂಕಿನ ಬಲಮುರಿ, ದೊಡ್ಡಪಾಳ್ಯ, ಚಿಕ್ಕಪಾಳ್ಯ, ಮಹದೇವಪುರ ಇತರೆಡೆ ನದಿ ತೀರದಲ್ಲಿ ಇರುವ ಜನರ ಬಗ್ಗೆ ನಿಗಾ ವಹಿಸಲಾಗಿದೆ. ಸ್ಥಳೀಯ ಸರ್ಕಾರಿ ಶಾಲೆಗಳಲ್ಲಿ ಪರಿಹಾರ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಬಿಸಿಯೂಟದ ಅಡುಗೆಯವರನ್ನು ಸನ್ನದ್ಧರಾಗಿ ಇರಿಸುವಂತೆ ಬಿಇಒಗೆ ತಿಳಿಸಲಾಗಿದೆ’ ಎಂದು ತಹಶೀಲ್ದಾರ್‌ ಎಂ.ವಿ. ರೂಪಾ ಹೇಳಿದರು.

ಉಪ ವಿಭಾಗಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಪುರಸಭೆ ಮುಖ್ಯಾಧಿಕಾರು ಕೃಷ್ಣ, ಕಂದಾಯ ನಿರೀಕ್ಷಕ ಜಯಕುಮಾರ್‌ ಇತರರು ಜತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT