ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ ಇಂದು

Published 28 ನವೆಂಬರ್ 2023, 19:19 IST
Last Updated 28 ನವೆಂಬರ್ 2023, 19:19 IST
ಅಕ್ಷರ ಗಾತ್ರ

ಕೆ.ಆರ್.ಪೇಟೆ: ಕನ್ನಡ ನಾಡು – ನುಡಿ, ನೆಲ-ಜಲದ ಬಗ್ಗೆ ಶಾಲಾ ಮಕ್ಕಳಲ್ಲಿ ಅರಿವು ಮೂಡಿಸಿ , ಅವರಲ್ಲಿ ಭಾಷಾಭಿಮಾನ ಮೂಡಿಸುವ ನಿಟ್ಟಿನಲ್ಲಿ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಿರುವ ಶಾಲೆಗೊಂದು ಕಾರ್ಯಕ್ರಮಕ್ಕೆ ಈಗ 35 ವರ್ಷಗಳ ಸಂಭ್ರಮ.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಶಾಲೆಗಳಲ್ಲಿ ಪ್ರತಿ ವರ್ಷ ನವಂಬರ್ ತಿಂಗಳಲ್ಲಿ ನಡೆಸುವ ಈ ಕಾರ್ಯಕ್ರಮ ಅಪಾರ ಮೆಚ್ಚುಗೆ ಗಳಿಸಿದ್ದು ಶೈಕ್ಷಣಿಕ ಸಂಸ್ಥೆಗಳಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿದ ಸಂದರ್ಭದಲ್ಲಿ ಈ ಬಾರಿ ಸುವರ್ಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ ಶಾಲೆಗೊಂದು ಕಾರ್ಯಕ್ರಮ ವಿಶೇಷ ರೀತಿಯಲ್ಲಿ ಆಚರಣೆ ಮಾಡಿದ್ದು ಇದರ ಸಮಾರೋಪ ಸಮಾರಂಭ ಪಟ್ಟಣದ ಕೆಪಿ ಎಸ್ ಶಾಲೆಯಲ್ಲಿ ನ.29ರಂದು ನಡೆಯಲಿದೆ.

ಕೇಂದ್ರ ಕಸಾಪ ಅಧ್ಯಕ್ಷರಾದ ಮಹೇಶ್ ಜೋಶಿ ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದು ರಾಜ್ಯ ಮಟ್ಟದ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭವೂ ನಡೆಯಲಿದೆ.

ಮಹೇಶ್ ಜೋಷಿ
ಮಹೇಶ್ ಜೋಷಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT