ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಿಯಮ ಪಾಲನೆ ಕಡ್ಡಾಯ: ಜಿಲ್ಲಾಧಿಕಾರಿ ಎಂ.ಅಶ್ವತಿ ಸೂಚನೆ

ಗಣರಾಜ್ಯೋತ್ಸವ ಪೂರ್ವಭಾವಿ ಸಭೆ
Last Updated 13 ಜನವರಿ 2022, 16:30 IST
ಅಕ್ಷರ ಗಾತ್ರ

ಮಂಡ್ಯ: ಗಣರಾಜ್ಯೋತ್ಸವದಲ್ಲಿ ಕೋವಿಡ್‌ ನಿಯಮ ಕಡ್ಡಾಯವಾಗಿ ಪಾಲಿಸಬೇಕು. ಶಿಷ್ಟಾಚಾರದಂತೆ ಜನಪ್ರತಿನಿಧಿಗಳು ಸೇರಿದಂತೆ ಪ್ರಮುಖರನ್ನು ಆಹ್ವಾನಿಸಬೇಕು ಎಂದು ಜಿಲ್ಲಾಧಿಕಾರಿ ಎಸ್‌.ಅಶ್ವತಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಸಂಬಂಧ ಗುರುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಬಾರಿಯ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಅದಕ್ಕಾಗಿ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು. ಜ.26ರಂದು ನಗರದ ಸರ್‌ ಎಂ.ವಿ.ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವರು ನೆರವೇರಿಸುವರು ಎಂದರು.

ಕಾರ್ಯಕ್ರಮದುದ್ದಕ್ಕೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಈ ಬಾರಿ ಶಾಲಾ ಮಕ್ಕಳಿಂದ ಯಾವುದೇ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ. ಕೇವಲ ಪೊಲೀಸ್‌, ಗೃಹರಕ್ಷಕ ದಳದವರಿಂದ ಪಥಸಂಚಲನ ನಡೆಯಲಿದೆ ಎಂದು ವಿವರಿಸಿದರು.

ಗಣರಾಜ್ಯೋತ್ಸದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮಗಳ ಯಶಸ್ಸಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದೆ. ಅವರಿಗೆ ನಿಗದಿಪಡಿಸಿರುವ ಜವಾಬ್ದಾರಿಯನ್ನು ಸಮನ್ವಯದಿಂದ ನಿರ್ವಹಿಸಬೇಕು. ಎಲ್ಲಿಯೂ ಯಾವುದೇ ವ್ಯತ್ಯಾಸ ಆಗದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಆರ್.ಶೈಲಜಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ಡಿ.ಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್ ಕುಮಾರ್, ವಾರ್ತಾಧಿಕಾರಿ ಟಿ.ಕೆ.ಹರೀಶ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT