ನಾಗಮಂಗಲ (ಮಂಡ್ಯ ಜಿಲ್ಲೆ): ನಾಗಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ ಅವರ ಕಾರು ಪಲ್ಟಿಯಾಗಿ, ಕೈಗೆ ಬಲವಾದ ಪೆಟ್ಟು ಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಚಾಲಕ ಶೇಖರ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಮಂಡ್ಯದ ಬೊಂತೆಕೊಪ್ಪಲು ಸಮೀಪ ಶನಿವಾರ ತಡರಾತ್ರಿ ಕಾರ್ಯಕರ್ತರ ಮದುವೆಗೆ ಹೋಗುತ್ತಿದ್ದಾಗ ಕಾರು ಪಲ್ಟಿಯಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಪಲ್ಟಿಯಾದ ತಕ್ಷಣ ಪೊಲೀಸರಿಗೆ ಗನ್ ಮ್ಯಾನ್ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಸುರೇಶ್ ಗೌಡ ಅವರನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.