ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ನಾಲ್ವರ ಸಾವು: 186 ಮಂದಿಗೆ ಸೋಂಕು

Last Updated 8 ಸೆಪ್ಟೆಂಬರ್ 2020, 16:38 IST
ಅಕ್ಷರ ಗಾತ್ರ

ಮಂಡ್ಯ: ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಮಂಗಳವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ.

ಮೃತರಾಗಿರುವ ನಾಲ್ವರೂ ಮಂಡ್ಯ ತಾಲ್ಲೂಕಿಗೆ ಸೇರಿದ್ದಾರೆ. 42 ವರ್ಷದ ವ್ಯಕ್ತಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. 65 ವರ್ಷದ ಮಹಿಳೆ ಮಧುಮೇಹ ತೀವ್ರಗೊಂಡಿತ್ತು. 75 ವರ್ಷ ವಯಸ್ಸಿನ ವ್ಯಕ್ತಿ, 55 ವರ್ಷದ ಮಹಿಳೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ವೆಂಟಿಲೇಟ್‌ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ಮಂಗಳವಾರ 186 ಮಂದಿಗೆ ಕೋವಿಡ್‌–19 ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,047ಕ್ಕೆ ಹೆಚ್ಚಾಗಿದೆ. ಮಂಡ್ಯ ತಾಲ್ಲೂಕಿನ 71 ಮಂದಿ, ಶ್ರೀರಂಗಪಟ್ಟಣ 35, ಕೆ.ಆರ್‌.ಪೇಟೆ 22, ಪಾಂಡವಪುರ 19, ನಾಗಮಂಗಲ 14, ಮಳವಳ್ಳಿ 12, ಮದ್ದೂರು ತಾಲ್ಲೂಕಿನ 9 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಕೋವಿಡ್‌ನಿಂದ ಗುಣಮುಖರಾದ 410 ಮಂದಿಯನ್ನು ವಿವಿಧ ಕೋವಿಡ್‌ ಕೇರ್‌ ಕೇಂದ್ರಗಳಿಂದ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 201 ಮಂದಿ, ಕೆ.ಆರ್‌.ಪೇಟೆ 115, ಪಾಂಡವಪುರ, ನಾಗಮಂಗಲ ತಲಾ 35, ಶ್ರೀರಂಗಪಟ್ಟಣ ತಾಲ್ಲೂಕಿನ 15 ಮಂದಿಯನ್ನು ಬಿಡುಗಡೆ ಮಾಡಲಾಯಿತು.

ಒಟ್ಟು ರೋಗಿಗಳಲ್ಲಿ ಇಲ್ಲಿಯವರೆಗೆ 5,065 ಮಂದಿ ಗುಣಮುಖರಾಗಿದ್ದಾರೆ. 1,905 ಪ್ರಕರಣಗಳು ಸಕ್ರಿಯವಾಗಿವೆ.

ಕೋವಿಡ್‌ ಅಂಕಿ–ಅಂಶ

ಜಿಲ್ಲೆಯಲ್ಲಿ ಒಟ್ಟು: 7,047

ಸಕ್ರಿಯ ಪ್ರಕರಣ: 1,905

ಏರಿಕೆ: 186

ಗುಣಮುಖ: 5,065

ಏರಿಕೆ: 410

ಸಾವು: 76

ಏರಿಕೆ: 04

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT