ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರಕಾರ್ಮಿಕನ ಮಕ್ಕಳಿಗೆ ಉಚಿತ ಶಿಕ್ಷಣ: ಎಂ.ಶಿವಣ್ಣ

ಆತ್ಮಹತ್ಯೆ ಮಾಡಿಕೊಂಡಿದ್ದ ಪೌರಕಾರ್ಮಿಕ
Last Updated 5 ಮಾರ್ಚ್ 2021, 4:11 IST
ಅಕ್ಷರ ಗಾತ್ರ

ಮಂಡ್ಯ: ಮದ್ದೂರು ಪುರಸಭೆಯ ಮೃತ ಪೌರಕಾರ್ಮಿಕ ಅವಲಂಬಿತ ಮಕ್ಕಳಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಪ್ರವೇಶ ಕಲ್ಪಿಸಿ ವಿದ್ಯಾಭ್ಯಾಸ ನೀಡಲಾಗುವುದು ಎಂದು ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೌರಕಾರ್ಮಿಕ ಅವಲಂಬಿತ ಕುಟುಂಬಕ್ಕೆ ಗುರುವಾರ ಪರಿಹಾರ ನೀಡಿ ಅವರು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ವಿದ್ಯಾಭ್ಯಾಸ ನೀಡಲು ಸೂಚನೆ ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ವಿದ್ಯಾಭ್ಯಾಸದೊಂದಿಗೆ 18 ವರ್ಷ ತುಂಬಿದ ನಂತರ ಸರ್ಕಾರಿ ಉದ್ಯೋಗ ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಚಾರ್ಜ್‌ ಶೀಟ್‌ ಹಾಕಲಾಗುವುದು ಎಂದು ಅವರು ಹೇಳಿದರು.

ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿಯಲ್ಲಿ ವಸತಿಯನ್ನು ಕಲ್ಪಿಸಲು ಯೋಜನೆ ಸಿದ್ಧಪಡಿಸಿ, ಕಾಯಂ ವಸತಿ ಕಲ್ಪಿಸಲಾಗುವುದು. ಪೌರಕಾರ್ಮಿಕ ಕುಟುಂಬಕ್ಕೆ ₹4.12 ಲಕ್ಷ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮೂರು ಮಕ್ಕಳಿಗೆ ಸಮಾನವಾಗಿ ₹4.12 ಲಕ್ಷ ಹಣವನ್ನು ಎಫ್‌ಡಿ ಮಾಡಲಾಗಿದೆ. 18 ವರ್ಷ ತುಂಬಿದ ನಂತರ ಅದು ಸಿಗಲಿದೆ. ಒಟ್ಟು ₹8.25 ಲಕ್ಷ ಪರಿಹಾರ ನೀಡಲಾಗಿದೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ವಿ.ಆರ್‌.ಶೈಲಜಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT