ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮ್ಮಿಶ್ರ ಸರ್ಕಾರದಿಂದ ಪೂರ್ಣಾವಧಿ ಆಡಳಿತ’

Last Updated 14 ಅಕ್ಟೋಬರ್ 2018, 20:10 IST
ಅಕ್ಷರ ಗಾತ್ರ

ಮಂಡ್ಯ: ಸಮ್ಮಿಶ್ರ ಸರ್ಕಾರ ಬಿದ್ದು ಹೋಗುತ್ತದೆ ಎಂಬ ಬಿಜೆಪಿ ನಾಯಕರ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಐದು ವರ್ಷ ಸಂಪೂರ್ಣವಾಗಿ ಆಡಳಿತ ನಡೆಸಲಿದೆ ಎಂದು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್‌ಟಿಯುಸಿ) ರಾಜ್ಯ ಘಟಕದ ಅಧ್ಯಕ್ಷ ಪುಟ್ಟಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು

ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಭಾನುವಾರ ನಡೆದ ಐಎನ್‌ಟಿಯುಸಿ ಸಭೆ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಕಾರ್ಮಿಕರಿಗೆ ಹಾಗೂ ಬಡವರ್ಗದ ಜನತೆಗೆ ಆಹಾರ ಭಾಗ್ಯದಿಂದ ಹಿಡಿದು, ಆರೋಗ್ಯ ಭಾಗ್ಯದವರೆಗೂ 30ಕ್ಕೂ ಹೆಚ್ಚು ಭಾಗ್ಯಗಳನ್ನು ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲೂ ಭಾಗ್ಯಗಳು ಜನರಿಗೆ ದೊರೆಯುತ್ತಿದೆ. 2019ಕ್ಕೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ಕಿತ್ತೆಸೆದು, ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆ ಮಾಡಲು ಪಕ್ಷಗಳ ಹೊಂದಾಣಿಕೆ ಅವಶ್ಯಕವಾಗಿದೆ. ಹೀಗಾಗಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದ್ದು, ಜೆಡಿಎಸ್‌ ಅಭ್ಯರ್ಥಿಯನ್ನು ಬೆಂಬಲಿಸಲು ತೀರ್ಮಾನಿಸಲಾಗಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಲ್ಕೂವರೆ ವರ್ಷದಿಂದ ಸುಳ್ಳು ಹೇಳುತ್ತಾ, ವಿದೇಶ ಪ್ರವಾಸ ಮಾಡಿದ್ದಾರೆ. ದೇಶದಲ್ಲಿ ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿವೆ. ರಫೇಲ್ ಹಗರಣ ನಡೆದಿದೆ. ಯುವಕರಿಗೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಸುಳ್ಳು ಹೇಳಿದ್ದಾರೆ. ಮೋದಿಯವರ ಸುಳ್ಳಿನಿಂದ ದೇಶಕ್ಕೆ ಅಚ್ಛೇದಿನ್ ಬರದೇ ಮಾರಕ ದಿನಗಳು ಬರಲಿವೆ ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಆತ್ಮಾನಂದ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್, ಐಎನ್‌ಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್, ಮುಖಂಡರಾದ ಸಿದ್ದರಾಮೇಗೌಡ, ಅಮರಾವತಿ ಚಂದ್ರಶೇಖರ್, ಗಂಗಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT