ಮಂಡ್ಯ: ಜನರ ಕಣ್ಮನ ಸೆಳೆಯುವ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಗಗನಚುಕ್ಕಿ ಜಲಪಾತದ ಉತ್ಸವವನ್ನು ಇದೇ ಸೆ.13 ಮತ್ತು 14ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿ, ಗಗನಚುಕ್ಕಿ ಜಲಪಾತವನ್ನು ಉನ್ನತ ಪ್ರವಾಸಿ ತಾಣ ಮಾಡಿ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು 2 ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಾಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ರೊಟ್ಟಿಕಟ್ಟೆಯ ಬಳಿ ನೀರು ಸರಬರಾಜು ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಮಳ್ಳಿ ಕ್ಯಾತನಹಳ್ಳಿಯ ಬಳಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ವೇದಿಕೆಯ ಬಳಿ ಜಲಪಾತದ ಮನಮೋಹಕ ದೃಶ್ಯಗಳನ್ನು ಸವಿಯಲು ಎಲ್.ಇ.ಡಿ ವ್ಯವಸ್ಥೆ ಸಹ ಮಾಡಲಾಗುವುದು ಎಂದರು.

ಉಚಿತ ಬಸ್ ವ್ಯವಸ್ಥೆ ಪ್ರವಾಸಿಗರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಹಾಗೂ ಸುಗಮ ವಾಹನ ಸಂಚಾರದ ದೃಷ್ಟಿಯಿಂದ ಮಳವಳ್ಳಿ ತಾಲ್ಲೂಕಿನಿಂದ ಗಗನಚುಕ್ಕಿಯವರೆಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಉಪಾಹಾರದ ವ್ಯವಸ್ಥೆ:

ಜಲಪಾತೋತ್ಸವ ನಡೆಯುವ ಸೆಪ್ಟೆಂಬರ್ 13 ಹಾಗೂ 14ರಂದು ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಬೆಳಿಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಉಚಿತವಾಗಿ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಲಪಾತ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವ ರೀತಿ ಕುಳಿತುಕೊಂಡು ವೀಕ್ಷಿಸಲು ಮೆಟ್ಟಿಲುಗಳು, ಲೈಟಿಂಗ್ ವ್ಯವಸ್ಥೆಗಳನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ‘ಅಕ್ವಪಾಕ್೯’ ಅಭಿವೃದ್ಧಿಪಡಿಸಲು ಚಿಂತಿಸಲಾಗುತ್ತಿದೆ. ಇದಲ್ಲದೆ ಪಿ.ಪಿ.ಪಿ ಮಾಡಲ್ ನಲ್ಲಿ ಉದ್ಯಾನ, ಜಲಕ್ರೀಡೆ ಮಾಡಲು ಸಹ ಯೋಜಿಸಲಾಗುತ್ತಿದೆ ಎಂದರು.

ಸ್ಥಳೀಯ ಕಲಾವಿದರಿಗೆ ಅವಕಾಶ ಎರಡು ದಿನಗಳ ಕಾರ್ಯಕ್ರಮದಲ್ಲಿ ಬೆಳಿಗ್ಗೆ 11ರಿಂದ 3 ಗಂಟೆಯವರೆಗೆ ಸ್ಥಳೀಯ ಕಲಾವಿದರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಉತ್ತಮವಾದ 2 ಅಥವಾ 3 ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ಪ್ರದರ್ಶನ ನೀಡಲು ಅವಕಾಶ ನೀಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಉಪಸ್ಥಿತರಿದ್ದರು.

ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮಗಳ ವಿವರ:

ಸೆಪ್ಟೆಂಬರ್ 13: ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು. ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ಸಾದ್ವಿನಿ ಕೊಪ್ಪ ಸಾಕ್ಷಿ ಕೊಲ್ಲೂರು ಹನುಮಂತ ಹಾಗೂ ಕಂಬದ ರಂಗಯ್ಯ ಗಾಯಕರಿಂದ ಜಾನಪದ ಸಂಗೀತ ಕಾರ್ಯಕ್ರಮ. ಸಂಜೆ 6ಕ್ಕೆ ಶಿವರಾಜ್ ಕೆ.ಆರ್.ಪೇಟೆ ಮತ್ತು ತಂಡದಿಂದ ಕಾಮಿಡಿ ಶೋ ಕಾರ್ಯಕ್ರಮ. ಸಂಜೆ 6.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕಾರ್ಯಕ್ರಮ ಉದ್ಘಾಟನೆ. ಸಂಜೆ 7.30ರಿಂದ ರಾತ್ರಿ 11 ರವರೆಗೆ ಅರ್ಜುನ್ ಜನ್ಯಾ ಮತ್ತು ಅವರ ತಂಡದಿಂದ ಹಾಗೂ ಖ್ಯಾತ ಗಾಯಕಿ ಮಂಗಲಿ ಅವರಿಂದ ಸಂಗೀತ ಕಾರ್ಯಕ್ರಮ ಚಲನಚಿತ್ರ ನಟಿಯರಾದ ರಾಗಿಣಿ ತ್ರಿವೇದಿ ಮನ್ವಿತ ಹರೀಶ್ ನನಟ ಡಾಲಿ ಧನಂಜಯ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸೆಪ್ಟೆಂಬರ್ 14: ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ. ಮಧ್ಯಾಹ್ನ 3ರಿಂದ ಸಂಜೆ 4.30ರವರೆಗೆ ಸವಿತಕ್ಕ ರವಿ ಮೂರುರು ಶ್ರೀಹರ್ಷ ಹಾಗೂ ಮಲ್ಲಿಕಾರ್ಜುನ ಕೆಂಕೆರೆ ಇವರಿಂದ ಜಾನಪದ ಸಂಗೀತ ಕಾರ್ಯಕ್ರಮ. ಸಂಜೆ 4:30ರಿಂದ 6 ರವರೆಗೆ ಬೆಂಗಳೂರಿನ ಲಿಕ್ವಿಡ್ ಡ್ರಮ್ಸ್ ಫ್ಯೂಷನ್ ತಂಡದಿಂದ ಸಂಗೀ ಕಾರ್ಯಕ್ರಮ. ಸಂಜೆ 6 ರಿಂದ 7ರವರೆಗೆ ಗಂಗಾವತಿ ಪ್ರಾಣೇಶ್ ಮತ್ತು ತಂಡದಿಂದ ಕಾಮಿಡಿ ಶೋ ಕಾರ್ಯಕ್ರಮ. ಸಂಜೆ 7 ರಿಂದ 7.30ರವರೆಗೆ ಸಮಾರೋಪ ಕಾರ್ಯಕ್ರಮ ಮತ್ತು 7.30ರಿಂದ 11 ಗಂಟೆಯವರೆಗೆ ಗುರುಕಿರಣ್ ಹಾಗೂ ತಂಡದಿಂದ ಸಂಗೀತ ಕಾರ್ಯಕ್ರಮದ ಆಯೋಜಿಸಿದ್ದು ಸಿನಿಮಾ ನಟಿಯರಾದ ಹರ್ಷಿಕ ಪೂಣಚ್ಚ ಮತ್ತು ಭಾವನಾ ನೃತ್ಯ ಪ್ರದರ್ಶಿಸಲಿದ್ದಾರೆ. ನಟ ರವಿಚಂದ್ರನ್ ಪಾಲ್ಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.