ಮಳವಳ್ಳಿ (ಮಂಡ್ಯ): ಕಾವೇರಿ ಜಲಾಯನ ಪ್ರದೇಶದಲ್ಲಿ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ತಾಲ್ಲೂಕಿನ ಶಿವನಸಮುದ್ರ ಸಮೀಪದ ವಿಶ್ವವಿಖ್ಯಾತ ಗಗನಚುಕ್ಕಿ ಜಲಪಾತದಲ್ಲಿ ನೀರು ಧುಮ್ಮಿಕ್ಕಿ ಹರಿಯುತ್ತಿದ್ದು, ವೀಕ್ಷಣೆಗೆ ರಮಣೀಯವಾಗಿದೆ.

ಸಾಮಾನ್ಯವಾಗಿ ಜುಲೈ ಮತ್ತು ಆಗಸ್ಟ್ನಲ್ಲಿ ಗಗನಚುಕ್ಕಿ ಜಲಪಾತಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿತ್ತು. ಪ್ರಸ್ತುತ ವರ್ಷ ಮೇ ತಿಂಗಳ ಕೊನೆಯ ವಾರದಲ್ಲಿಯೇ ಪೂರ್ವ ಮುಂಗಾರು ಪ್ರಾರಂಭವಾಗಿರುವುದರಿಂದ ಜೂನ್ ಮಧ್ಯಭಾಗದಲ್ಲಿಯೇ ಜೀವಕಳೆ ಬಂದಿದ್ದು, ಪ್ರವಾಸಿಗರನ್ನು ವೈಭವದತ್ತ ಕೈಬೀಸಿ ಕರೆಯುತ್ತಿದೆ.

ಕೊಡಗಿನ ತಲಕಾವೇರಿಯಲ್ಲಿ ಉಗಮವಾಗುವ ಕಾವೇರಿ ನದಿಯು ಉಪ ನದಿಗಳೊಂದಿಗೆ ಸಂಗಮಗೊಂಡು ಕೆಆರ್ಎಸ್ ಜಲಾಶಯ ಸೇರುತ್ತದೆ. ಅಣೆಕಟ್ಟೆಯಿಂದ ಹೊರಬರುವ ಕಾವೇರಿ ನದಿಯೊಂದಿಗೆ ಟಿ.ನರಸೀಪುರ ಬಳಿ ಕಬಿನಿ ಮೊದಲಾದ ಉಪನದಿಗಳು ಸಂಗಮವಾಗುತ್ತವೆ. ಬೆಟ್ಟಗುಡ್ಡ, ಕಾಡುಮೇಡುಗಳ ಮೂಲಕ ಶಿವನಸಮುದ್ರ ತಲುಪುತ್ತಿದ್ದಂತೆಯೇ 419 ಅಡಿ ಎತ್ತರದಿಂದ ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳಾಗಿ ಧುಮ್ಮಿಕ್ಕುತ್ತದೆ.
.PHOTOS | ಮುಂಗಾರು ಮಳೆಯಲ್ಲಿ ಗಗನಚುಕ್ಕಿ ಜಲಪಾತದ ವೈಭವ.
ಜಲಪಾತದ ಬಳಿ ಲೋಕೋಪಯೋಗಿ ಇಲಾಖೆಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, ಜಲಪಾತದ ಸೌಂದರ್ಯವನ್ನು ಹತ್ತಿರದಿಂದ ಸವಿಯಲು ಪ್ರವಾಸಿಗರಿಗೆ ಅನುಕೂಲವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.