ಬೆಳಕವಾಡಿ: ಸಮೀಪದ ಕಿರಗಸೂರು ಗ್ರಾಮದಲ್ಲಿ ಜೂಜು ಅಡ್ಡೆ ಮೇಲೆ ದಾಳಿ ಮಾಡಿ ಬೆಳಕವಾಡಿ ಪೊಲೀಸರು 4 ನಾಲ್ವರನ್ನು ಬಂಧಿಸಿದ್ದಾರೆ.
ಗ್ರಾಮದ ಮನೆಯೊಂದರಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪಿಎಸ್ಐ ವಿ. ಸಿ.ಅಶೋಕ್ ನೇತೃತ್ವದ ತಂಡ ದಾಳಿ ಮಾಡಿ ಪಣದಲ್ಲಿದ್ದ ₹2 ಸಾವಿರ ಹಣವನ್ನು ವಶಪಡಿಸಿಕೊಂಡಿದೆ. ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.