‘ಸಿಸಿಟಿವಿ ಕ್ಯಾಮೆರಾ ಅಳವಡಿಸಿ’
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಈಗಾಗಲೇ ನಾಗಮಂಗಲ ನಗರ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ್ದು ಸದರಿ ಸ್ಥಳದಲ್ಲಿ ದುರಸ್ತಿಯಾಗಿರುವ ಸಿಸಿಟಿವಿ ಕ್ಯಾಮೆರಾವನ್ನು ನಗರ ಸ್ಥಳೀಯ ಸಂಸ್ಥೆ ಅವರು ಕೂಡಲೇ ಸರಿಪಡಿಸಬೇಕು. ಈ ಬಾರಿ ಪೊಲೀಸ್ ಇಲಾಖೆಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲು ಅನುಮತಿ ಪಡೆಯುವ ಗಣಪತಿಗಳ ಪ್ರತಿಷ್ಠಾಪನೆಗಳಿಗೆ ಸಂಖ್ಯೆ ನೀಡಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು.