ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆರೋಗ್ಯದ ಕಡೆಗೂ ಗಮನ ಅಗತ್ಯ’: ಎಸ್.ಬಿ.ವಸ್ತ್ರಮಠ

Last Updated 3 ಜನವರಿ 2022, 2:28 IST
ಅಕ್ಷರ ಗಾತ್ರ

ಮಂಡ್ಯ: ದೇಹ ಮತ್ತು ಮನಸ್ಸನ್ನು ಆರೋಗ್ಯವಾಗಿ ಇರಿಸಿಕೊಳ್ಳಲು ಕ್ರೀಡೆ ಸಹಕಾರಿ ಆಗಿದೆ. ಕೆಲಸದ ಒತ್ತಡದಲ್ಲಿರುವ ಪೊಲೀಸರು ಆರೋಗ್ಯದ ಕಡೆ ಗಮನ ಹರಿಸುವುದು ಮುಖ್ಯ ಎಂದುಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ ಸಲಹೆ ನೀಡಿದರು.

ನಗರದ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದ ಆವರಣದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಭಾನುವಾರ ಆರಂಭವಾದವಾರ್ಷಿಕ ಕ್ರೀಡಾ ಕೂಟ–2021 ಉದ್ಘಾಟಿಸಿ ಅವರು ಮಾತನಾಡಿದರು.

ಒಳ್ಳೆಯ ವಿಚಾರಗಳು ಇದ್ದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂಬ ಭಾವನೆಯನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಇಂದಿನ ಒತ್ತಡದ ನಡುವೆ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಅರಿತುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಎಸ್.ಅಶ್ವತಿ ಮಾತನಾಡಿ, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಜವಾಬ್ದಾರಿ ಹೆಚ್ಚಿದೆ. ಪೊಲೀಸರು ಹಗಲು- ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸಬೇಕಾಗಿದ್ದು, ಅವರು ಸದಾ ಒತ್ತಡದಲ್ಲೇ ಇರುವ ಸನ್ನಿವೇಶ ಇರುತ್ತದೆ. ಪೊಲೀಸರು ದೇಹ ದಂಡನೆಗಾಗಿ ಕ್ರೀಡೆಗಳತ್ತ ಆಸಕ್ತಿ ತೋರಬೇಕು.ಕೋವಿಡ್ ಮಹಾಮಾರಿ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಿ, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡಿರುವುದು ಶ್ಲಾಘನೀಯ ಎಂದರು.

ಮಹಿಳಾ ಸಿಬ್ಬಂದಿಯೂ ಕೆಲಸದ ಜೊತೆಗೆ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವುದು ಸೂಕ್ತ. ಇದರ ನಡುವೆ ಒಂದು ದಿನ ಎಲ್ಲವನ್ನೂ ಮರೆತು ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ ಸದಾಕಾಲ ಬೆಳೆಸಿಕೊಳ್ಳಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT