ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ: ಕುಮಾರಸ್ವಾಮಿ ವಿರುದ್ಧ ಗೋಬ್ಯಾಕ್‌ ಚಳವಳಿ

Published 14 ಏಪ್ರಿಲ್ 2024, 14:24 IST
Last Updated 14 ಏಪ್ರಿಲ್ 2024, 14:24 IST
ಅಕ್ಷರ ಗಾತ್ರ

ಮಂಡ್ಯ: ‘ಜೆಡಿಎಸ್‌– ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿ ಕಾಂಗ್ರೆಸ್‌ ಮಹಿಳಾ ಘಟಕದ ಕಾರ್ಯಕರ್ತೆಯರು ನಗರದ ಜೆ.ಸಿ.ವೃತ್ತದಲ್ಲಿ ಭಾನುವಾರ ‘ಗೋಬ್ಯಾಕ್‌ ಕುಮಾರಸ್ವಾಮಿ’ ಚಳವಳಿ ನಡೆಸಿದರು.

‘ಮಹಿಳೆಯರ ವಿರುದ್ಧ ಮಾತನಾಡಿರುವ ಅವರು ಕ್ಷೇತ್ರಕ್ಕೆ ಕಾಲಿಡಬಾರದು’ ಎಂದು ಎಚ್ಚರಿಕೆ ನೀಡಿದರು.

‘ಮಹಿಳೆಯರಿಗೆ ದುಡ್ಡು ಸಿಕ್ಕರೆ ಕುಟುಂಬ ನಿರ್ವಹಣೆ ಮಾಡುತ್ತಾರೆ. ಮಹಿಳೆಯನ್ನು ಪೂಜಿಸುವ ನಾಡು ನಮ್ಮದು. ಗೌರವಿಸಬೇಕಾದ ಮಾಜಿ ಮುಖ್ಯಮಂತ್ರಿಯೇ ಕೆಟ್ಟದಾಗಿ ಮಾತನಾಡಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಹಿಂದೆಯೂ ಅವರು ಹಲವು ಬಾರಿ ಮಹಿಳೆಯರ ಬಗ್ಗೆ ಅಗೌರವದಿಂದ ಮಾತನಾಡಿದ್ದಾರೆ. ಸುಮಲತಾ ವಿರುದ್ಧ ಕೆಟ್ಟದಾಗಿ ಮಾತನಾಡಿದ ಕಾರಣದಿಂದ ಅವರ ಪುತ್ರ ಸೋಲಬೇಕಾಯಿತು. ಬೆಳಗಾವಿಯ ರೈತ ಮಹಿಳೆಯನ್ನು ‘ಇಷ್ಟು ದಿನ ಎಲ್ಲಿ ಮಲಗಿದ್ದೆಯಮ್ಮ’ ಎಂದು ಪ್ರಶ್ನಿಸಿದ್ದರು. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಕೂಡಲೇ ಅವರು ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT