ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಕವಾಡಿ | ಚಿರತೆ ದಾಳಿಗೆ ಮೇಕೆ ಸಾವು

Published 28 ಮೇ 2024, 14:27 IST
Last Updated 28 ಮೇ 2024, 14:27 IST
ಅಕ್ಷರ ಗಾತ್ರ

ಬೆಳಕವಾಡಿ: ಸಮೀಪದ ಜವನಗಹಳ್ಳಿಯಲ್ಲಿ ಮಂಗಳವಾರ ಬೆಳಗಿನ ಜಾವ ಮೇಕೆಯ ಮೇಲೆ ಚಿರತೆಯೊಂದು ದಾಳಿ ಮಾಡಿ ಕೊಂದು ಹಾಕಿದೆ.

ಗ್ರಾಮದ ಮಣಿ ಎಂಬುವರು ದೇವರ ಸೇವೆಗೆಂದು ಸಾಕಿ, ಮನೆಯ ಮುಂಭಾಗ ಕಟ್ಟಿದ್ದ ಮೇಕೆಯ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಇದರಿಂದ ಸುಮಾರು ₹ 20 ಸಾವಿರ ನಷ್ಟವಾಗಿದೆ.

‘ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದರಿಂದ ಜನರಲ್ಲಿ ಆತಂಕ ನಿರ್ಮಾಣವಾಗಿದೆ. ಆದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಚಿರತೆ ಸೆರೆಗೆ ಮುಂದಾಗಬೇಕು’ ಎಂದು ಗ್ರಾಮದ ಮಹದೇವ್, ಬಸವರಾಜು, ನಂದೀಶ್, ಮಣಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT