ಮಂಡ್ಯ: ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮಂಡ್ಯ ಜಿಲ್ಲೆಗೆ ₹3,200 ಕೋಟಿ ಹಣ ಬಿಡುಗಡೆ ಆಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ನಮ್ಮ ಸರ್ಕಾರ ₹94 ಸಾವಿರ ಕೋಟಿ ಖರ್ಚು ಮಾಡಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಘಟಕದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದರು.

ಈ ಯೋಜನೆಗಳ ಅನುಷ್ಠಾನದ ಕುರಿತು ಇತ್ತೀಚೆಗೆ ಇಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಮಾದರಿ ಯೋಜನೆಗಳಾಗಿವೆ ಎಂದು ಹೇಳಿದರು.

ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಮಾರ್ಗದರ್ಶನದಲ್ಲಿ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿವೆ. ರಾಜ್ಯದ ತಳಸಮುದಾಯ ಸೇರಿದಂತೆ ಎಲ್ಲಾ ವರ್ಗದವರಿಗೂ ತಲುಪುತ್ತಿದ್ದು, ಫಲಾನುಭವಿಗಳಲ್ಲಿ ಇವುಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಇದುವರೆಗೂ 18 ಸಭೆಗಳು ನಡೆದಿವೆ. ಯೋಜನೆಗಳ ಅನುಷ್ಠಾನ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದರೆ ಪರಿಹರಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ಉಪಾಧ್ಯಕ್ಷ ಪ್ರಶಾಂತ್ ಬಾಬು, ರಾಜೇಂದ್ರ, ಶಿವಣ್ಣ, ಹನುಮಂತಯ್ಯ, ಜಿ.ಪಂ.ಮುಖ್ಯ ಯೋಜನಾಧಿಕಾರಿ ಧನುಷ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.