ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಶಿಕ್ಷಕರ ಮತ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ

Published 23 ನವೆಂಬರ್ 2023, 14:52 IST
Last Updated 23 ನವೆಂಬರ್ 2023, 14:52 IST
ಅಕ್ಷರ ಗಾತ್ರ

ಮಂಡ್ಯ: ಕರ್ನಾಟಕದ ದಕ್ಷಿಣ ಶಿಕ್ಷಕರ ಮತ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ಮತದಾರ ನೊಂದಣಿ ಅಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಸಹಾಯಕ ಮತದಾರರ ನೊಂದಣಿ ಅಧಿಕಾರಿಗಳು, ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿ ವೆಬ್‌ಸೈಟ್‌ ಮತ್ತು ಸಂಬಂಧಪಟ್ಟ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಗಳ ಕಚೇರಿ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಲಾಗಿರುತ್ತದೆ ಎಂದು ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಅವರು ತಿಳಿಸಿದ್ದಾರೆ.

ಕರ್ನಾಟಕದ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ನ.6 ರವರೆಗೆ 14,383 ಅರ್ಜಿಗಳು ಸ್ವೀಕರಿಸಲಾಗಿದೆ. ಅದರಲ್ಲಿ 14.206 ಮತದಾರರನ್ನು ನೋಂದಣಿ ಮಾಡಿಕೊಂಡು, ಉಳಿದ 177 ಅರ್ಜಿ ತಿರಸ್ಕರಿಸಲಾಗಿದೆ. ಕರಡು ಮತದಾರ ಪಟ್ಟಿಯಲ್ಲಿ 8,061 ಪುರುಷರು, 6,145 ಮಹಿಳೆಯರು ಒಟ್ಟು 14,206 ಮತದಾರರಿದ್ದಾರೆ.

ನ.6 ರವರೆಗೆ ಅರ್ಜಿಗಳನ್ನು ಸಲ್ಲಿಸಲಾದ ಎಲ್ಲಾ ಅರ್ಜಿದಾರರು ನಿಗದಿಪಡಿಸಿದ ಸಂಬಂಧಿತ ಪದವಿಧರ ಶಿಕ್ಷಕರ ಕ್ಷೇತ್ರದ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಲು ಮತ್ತು ಹಕ್ಕುಗಳು ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಡಿ.9 ರವರೆಗೆ ಸಂಬಂಧಪಟ್ಟ ಚುನಾವಣೆ ನೋಂದಣಿ ಅಧಿಕಾರಿಗಳಿಗೆ ಸಲ್ಲಿಸಬೇಕು. ಜೊತೆಗೆ ಅರ್ಹ ಶಿಕ್ಷಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ನಮೂನೆ 18 ಮತ್ತು 19ರಲ್ಲಿ ಡಿ.9 ರವರೆಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT