ಗುರುವಾರ , ಆಗಸ್ಟ್ 11, 2022
27 °C

ಹಲಗೂರು: ಗ್ರಾ.ಪಂ.ನತ್ತ ಪದವೀಧರರ ಒಲವು

ಚೇತನ ಕುಮಾರ ಎ.ಬಿ Updated:

ಅಕ್ಷರ ಗಾತ್ರ : | |

Prajavani

ಹಲಗೂರು: ಈ ಬಾರಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸದಸ್ಯರಾಗಲು ಸ್ನಾತಕೋತ್ತರ ಪದವೀಧರರು ಉಮೇದುವಾರಿಕೆ ಸಲ್ಲಿಸಿದ್ದಾರೆ.

ಸಮೀಪದ ಡಿ.ಹಲಸಹಳ್ಳಿ ಗ್ರಾಮದ ಎಚ್.ಸಿ. ಸತೀಶ್, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದು, ಬಿ.ಎಡ್ ಪದವಿ ಜೊತೆಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಗಣಿತದಲ್ಲಿ ಎಂ.ಎಸ್ಸಿ ಪದವಿ ಪಡೆದಿದ್ದಾರೆ.

ಮಳವಳ್ಳಿಯ ಆದರ್ಶ ಪ್ರೌಢಶಾಲೆಯಲ್ಲಿ ಎಂಟು ವರ್ಷ ಮುಖ್ಯ ಶಿಕ್ಷಕರಾಗಿ, ಮೂರು ವರ್ಷಗಳ ಕಾಲ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ಹುದ್ದೆಗೆ ರಾಜೀನಾಮೆ ನೀಡಿ, ಈಗ ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಪಂಚಾಯಿತಿ ವ್ಯಾಪ್ತಿಯ ನೂರಾರು ಕುಟುಂಬಗಳು ಖಾಸಗಿ ಶಾಲೆಗಳ ಡೊನೇಷನ್ ಹಾವಳಿಯಿಂದ ನರಳುತ್ತಿವೆ. ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಸರ್ಕಾರಿ ಶಾಲೆಯನ್ನು ಮಾದರಿ ಶಾಲೆಯಾಗಿಸುವ ತುಡಿತವಿದೆ. ಈ ಭಾಗದ ಜನರಿಗೆ ಆಸ್ಪತ್ರೆ ವ್ಯವಸ್ಥೆ ಗಗನ ಕುಸುಮವಾಗಿದೆ. ಮೂಲ ಸೌಲಭ್ಯ ಒದಗಿಸುವ ಇಂಗಿತ ಇದೆ. ಗ್ರಾಮದ ಸಮಗ್ರ ಅಭಿವೃದ್ಧಿಯ ಕನಸು ಕಾಣುತ್ತಿದ್ದು, ಮೊದಲ ಬಾರಿಗೆ ಸ್ಪರ್ಧೆಗೆ ಇಳಿದಿದ್ದೆನೆ. ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಪ್ರಜಾವಾಣಿಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು