ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ | ರಾಜ್ಯಪಾಲರ ಬಗ್ಗೆ ಅವಹೇಳನ: ಶಾಸಕ ನರೇಂದ್ರಸ್ವಾಮಿ ವಿರುದ್ಧ ಬಿಜೆಪಿ ದೂರು

Published : 19 ಆಗಸ್ಟ್ 2024, 14:29 IST
Last Updated : 19 ಆಗಸ್ಟ್ 2024, 14:29 IST
ಫಾಲೋ ಮಾಡಿ
Comments

ಮಂಡ್ಯ: ‘ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ಸೋಮವಾರ ದೂರು ನೀಡಿದರು.

‘ಸದನದಲ್ಲಿ ಶಾಸಕರಿಗೆ ಕನ್ನಡ ವ್ಯಾಕರಣದ ಬಗ್ಗೆ ಪಾಠ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪಕ್ಷದ ಶಾಸಕ ನರೇಂದ್ರಸ್ವಾಮಿಗೆ ಏಕವಚನ, ಬಹುವಚನದ ಪಾಠ ಹೇಳಿಕೊಡಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯಪಾಲರು ಸಂವಿಧಾನ ರಕ್ಷಣೆಯ ಹೊಣೆ ಹೊತ್ತಿದ್ದಾರೆ. ಅಂಥ ಗೌರವಾನ್ವಿತ ಹುದ್ದೆಯಲ್ಲಿರುವವರ ಬಗ್ಗೆ ಶಾಸಕರು ಏಕವಚನದಲ್ಲಿ ಮಾತನಾಡಿ ಸಂವಿಧಾನಕ್ಕೆ ಅಗೌರವ ತಂದಿದ್ದಾರೆ. ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವರ ಬಗ್ಗೆಯೂ ಕೀಳುಮಟ್ಟದ ಭಾಷೆ ಬಳಿಸಿದ್ದಾರೆ’ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್‌, ಹೊಸಹಳ್ಳಿ ಶಿವು, ಶಿವಲಿಂಗಯ್ಯ, ನಾಗಾನಂದ್, ಶಿವಕುಮಾರ್, ಹನುಮಂತು, ಪ್ರಸನ್ನ, ಚಂದ್ರು ಇದ್ದರು.

ನಾವು ಆರ್‌ಎಸ್‌ಎಸ್‌ ಚಡ್ಡಿಗೆ ಹೆದರುವವರಲ್ಲ. ನೂರು ದೂರು ಕೊಟ್ಟರೂ ತಲೆಕೆಡಿಸಿಕೊಳ್ಳಲ್ಲ. ನೀರಿಗಾಗಿ ಹೋರಾಟ ಮಾಡಿದಾಗಲೂ ಕೇಸ್‌ ಹಾಕಿಸಿದ್ರು. ನ್ಯಾಯಾಲಯದಲ್ಲಿ ಹೋರಾಡುತ್ತೇವೆ.
–ಪಿ.ಎಂ. ನರೇಂದ್ರಸ್ವಾಮಿ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT