ಮಂಡ್ಯ: ‘ಗ್ಯಾರಂಟಿ ಯೋಜನೆಗಳು ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲ ಸಮುದಾಯದವರಿಗಾಗಿ ರೂಪಿತವಾಗಿವೆ. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆಯನ್ನು ರಾಜ್ಯ ಸರ್ಕಾರವು ಬಡವರ ಜೀವನ ಸುಧಾರಣೆಗಾಗಿ ಜಾರಿಗೆ ತಂದಿದೆ. ಇದು ರಾಹುಲ್ ಗಾಂಧಿಯವರ ಕನಸು ಮತ್ತು ಸಿದ್ದರಾಮಯ್ಯರವರ ಬಡವರ ಮೇಲಿನ ಕಾಳಜಿಯ ಧ್ಯೋತಕ ಎಂದರು.

‘ಜಿಲ್ಲೆಯಲ್ಲಿ ಪ್ರತಿ ತಿಂಗಳು ಒಂದೊಂದು ಗ್ರಾಮ ಎಂಬುವಂತೆ ಜನ ಸಾಮಾನ್ಯರ ಗ್ಯಾರಂಟಿ ಸಮಸ್ಯೆ, ಶಿಕ್ಷಣ, ಆರೋಗ್ಯ ಹಾಗೂ ಇತರ ಸಮಸ್ಯೆಗಳನ್ನು ಆಲಿಸಲು ಪಂಚಾಯಿತಿ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು’ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಮಾತನಾಡಿ, ‘ಕರ್ನಾಟಕ ರಾಜ್ಯ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಸರ್ಕಾರದ ಪಾತ್ರ ಮಹತ್ವವಾದದ್ದು, ಉಳುವವನಿಗೆ ಭೂಮಿ ನೀಡುವುದು, ಪಡಿತರ ವೇತನ, ವೃದ್ಧಾಪ್ಯ ವೇತನ, ರೈತರಿಗಾಗಿ ವಿದ್ಯುತ್ ಸೌಲಭ್ಯ, ಅನ್ನಭಾಗ್ಯ, ಮಾನವ ಸಂಪನ್ಮೂಲ ಅಭಿವೃದ್ಧಿ ಹೀಗೆ ಹತ್ತು ಹಲವು ಸೌಲಭ್ಯ ಮತ್ತು ಯೋಜನೆಗಳನ್ನು ರಾಜ್ಯಕ್ಕೆ ಸರ್ಕಾರ ಕೊಡುಗೆಯಾಗಿ ನೀಡಿದೆ’ ಎಂದರು.

ಸಾಕ್ಷ್ಯಚಿತ್ರ ಪ್ರದರ್ಶನ:

ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆ ಕುರಿತು ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು ಮತ್ತು ಗೃಹಲಕ್ಷ್ಮಿ ಹಣದಿಂದ ಸರ್ಕಾರಿ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿರುವ ಶ್ರೀರಂಗಟ್ಟಣ ತಾಲ್ಲೂಕಿನ ವಿಜಯಲಕ್ಷ್ಮಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಲಿಂಗಯ್ಯ, ಶಾಸಕರಾದ ಪಿ. ರವಿಕುಮಾರ್, ಕೆ.ಎಂ. ಉದಯ್, ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ನಹೀಂ, ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸೂರಜ್ ಹೆಗ್ಡೆ, ವಾಸು, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ.ಆರ್. ನಂದಿನಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಇದ್ದರು.

Highlights - ಶ್ರೀರಂಗಟ್ಟಣ ತಾಲ್ಲೂಕಿನ ವಿಜಯಲಕ್ಷ್ಮಿ ಅವರಿಗೆ ಸನ್ಮಾನ ಪಂಚಾಯಿತಿ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ಯುವನಿಧಿ: 2.67 ಲಕ್ಷ ಫಲಾನುಭವಿಗಳಿಗೆ ಸೌಲಭ್ಯ

ಅಭಿವೃದ್ಧಿ ಯೋಜನೆಗೂ ಅನುದಾನ: ಸಚಿವ ‘ಪಂಚ ಗ್ಯಾರಂಟಿಯಿಂದ ರಾಜ್ಯವು ಇತರೆ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನಹರಿಸುತ್ತಿಲ್ಲ ಎಂಬ ಮಾತು ಸತ್ಯವಲ್ಲ. ಪಂಚ ಗ್ಯಾರಂಟಿ ಅನುಷ್ಠಾನವಾದ ನಂತರ ಸರ್ಕಾರ ಕೊರತೆ ಇಲ್ಲದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ’ ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.  ಇತಿಹಾಸದಲ್ಲಿ ಮೊದಲ ಬಾರಿಗೆ ತಾಲ್ಲೂಕುಗಳ ಅಭಿವೃದ್ಧಿಗೆ ವಿಧಾನಸಭಾ ಶಾಸಕರಿಗಳಿಗೆ ವಿವೇಚನಾ ಕೋಟವಾಗಿ ₹50 ಕೋಟಿ ಅನುದಾನ ನೀಡುತ್ತಿದೆ. ಜಿಲ್ಲೆಯಲ್ಲಿ ಮೈಷುಗರ್ ಕಾರ್ಖಾನೆ ಅಭಿವೃದ್ಧಿಗೆ ಹಾಗೂ ಕೃಷಿ ವಿಶ್ವವಿದ್ಯಾಲಯಕ್ಕಾಗಿ ನೂರಾರು ಅನುದಾನ ನೀಡಿದೆ ಎಂದು ವಿವರಿಸಿದರು.

‘ನಾಲ್ಕು ಗ್ಯಾರಂಟಿಗಳು ಮಹಿಳೆಯರ ಪರ’

ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ ಮಾತನಾಡಿ ‘ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಯಲ್ಲಿ ನಾಲ್ಕು ಗ್ಯಾರಂಟಿಗಳು ಮಹಿಳೆಯರ ಪರವಾಗಿವೆ. ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಫಲಾನುಭವಿಗಳಿಗೆ ಇದುವರೆಗೆ ₹57500 ಕೋಟಿ ಹಣವನ್ನು ಸರ್ಕಾರ ನೀಡಿದೆ. ಗೃಹಜ್ಯೋತಿ ಯೋಜನೆಯಡಿ 1.67 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಿದೆ. ಶಕ್ತಿ ಯೋಜನೆಯ ಮೂಲಕ ಮಹಿಳೆಯರು ₹590 ಕೋಟಿ ಮೊತ್ತದ ಟಿಕೆಟ್ ಪಡೆದು ಉಚಿತ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ₹15 ಸಾವಿರ ಕೋಟಿ ಹಣ ನೀಡಿದ್ದು ಯುವನಿಧಿಯಡಿ 2.67 ಲಕ್ಷ ಫಲಾನುಭವಿಗಳಿಗೆ ₹677 ಕೋಟಿ ಹಣವನ್ನು ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.