ಶ್ರೀರಂಗಪಟ್ಟಣ: ‘ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನ ಮಟ್ಟ ಸುಧಾರಿಸುತ್ತಿದೆ’ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಲ್. ದಿನೇಶ್ ಹೇಳಿದರು.

ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ಮಂಗಳವಾರ ನಡೆದ ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಮತ್ತು ಗೃಹಲಕ್ಷ್ಮಿ ಯೋಜನೆ ಹಣದಿಂದ ಸ್ವಾವಲಂಬನೆ ಸಾಧಿಸಿರುವ ಮಹಿಳೆಯರ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗ್ಯಾರಂಟಿ ಯೋಜನೆಗಳಿಂದ ಜನರ ತಲಾದಾಯ ಹೆಚ್ಚಾಗಿದೆ. ಅನ್ನಭಾಗ್ಯ ಯೋಜನೆಯಿಂದ ಹಸಿವು ಮುಕ್ತ ಕರ್ನಾಟಕದ ಆಶಯ ಈಡೇರಿದೆ. ಶಕ್ತಿ ಯೋಜನೆಯಿಂದ ಮಹಿಳೆಯರ ಮುಕ್ತ ಸಂಚಾರಕ್ಕೆ ಅವಕಾಶ ಸಿಕ್ಕಿದೆ. ಯುವ ನಿಧಿಯಿಂದ ನಿರುದ್ಯೋಗಿಗಳ ಬವಣೆ ನೀಗುತ್ತಿದೆ’ ಎಂದು ಅವರು ತಿಳಿಸಿದರು.

ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಎಂ.ಎಂ. ತ್ರಿವೇಣಿ ಮಾತನಾಡಿ, ‘ಗೃಹಲಕ್ಷ್ಮಿ ಯೋಜನೆಯ ಹಣದಿಂದ ಸಾಕಷ್ಟು ಮಹಿಳೆಯರು ವಿವಿಧ ಅಂಗಡಿಗಳನ್ನು ತೆರೆದಿದ್ದಾರೆ. ಹಸು ಮತ್ತು ಹೊಲಿಗೆ ಯಂತ್ರ ಖರೀದಿಸಿದ್ದಾರೆ. ಕುಟುಂಬಗಳ ಮಾಸಿಕ ವೆಚ್ಚ ತಗ್ಗಿದ್ದು, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ’ ಎಂದರು.

ಯೋಜನೆಯ ಜಿಲ್ಲಾ ಸಮಿತಿ ಸದಸ್ಯ ಮಹಮದ್ ಅನ್ಸರ್, ತಾಲ್ಲೂಕು ಸಮಿತಿ ಸದಸ್ಯರಾದ ದೇವರಾಜು, ಸತೀಶ್, ಗ್ರಾ.ಪಂ. ಅಧ್ಯಕ್ಷ ಬಿ. ರವಿಕುಮಾರ್, ಮಾಜಿ ಅಧ್ಯಕ್ಷ ಬಿ.ವಿ. ಸುರೇಶ್, ಸದಸ್ಯ ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಭಿವೃದ್ಧಿ ಇಲಾಖೆ ಸಂಯೋಜಕಿ ಪುಷ್ಪಲತಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.