ಮದ್ದೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರ ಜನ್ಮದಿನದ ಅಂಗವಾಗಿ ಮಂಡ್ಯ ನಗರದಲ್ಲಿ ಡಿ.15ರಂದು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಂಡ್ಯ ನಗರದಲ್ಲಿ ಡಿ.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವುದರಿಂದ ಡಿ.15ರಂದು ಅಭಿನಂದನಾ ಸಮಾರಂಭ ನಡೆಸಿದರೆ ಗೊಂದಲ ಉಂಟಾಗುತ್ತದೆ, ಕಾರ್ಯಕ್ರಮವನ್ನು ಮುಂದೂಡಿ ಎಂದು ಸ್ವತಃ ಎಚ್.ಡಿ.ಕುಮಾರಸ್ವಾಮಿಯವರೇ ಸೂಚನೆ ಕೊಟ್ಟ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ಸಮಾರಂಭ ಮುಂದೂಡಲು ಬೇರೆ ಯಾವ ಕಾರಣವೂ ಇಲ್ಲ. ಕನ್ನಡ ಸಾಹಿತ್ಯ ಸಮ್ಮೇಳನ ಮುಗಿದ ಬಳಿಕ ಸಮಾರಂಭ ಮಾಡಲಿದ್ದೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಸೋತ ಮಗನನ್ನು (ನಿಖಿಲ್ ಕುಮಾರಸ್ವಾಮಿ) ಮುಂದಿಟ್ಟುಕೊಂಡು, ಜೆಡಿಎಸ್ನವರು ಯಾವ ಸಮಾವೇಶ ಮಾಡುತ್ತಾರೆ’ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಟೀಕಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
.ರಾಜ್ಯದಲ್ಲಿ ಆರ್ಥಿಕ ಸಂಕಷ್ಟವಿಲ್ಲ, ಬಿಜೆಪಿ ಜನರ ದಿಕ್ಕು ತಪ್ಪಿಸುತ್ತಿದೆ: ಸಿಎಂ.‘ಬಾಡೂಟ ಯಾಕಿಲ್ಲ ಸ್ವಾಮಿ?’: ಪರಿಷತ್ತಿನ ನಿಯಮದ ಕುರಿತು ಪರ–ವಿರೋಧ ಚರ್ಚೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.