ಮಹಿಳೆ ಸಾವು: ಎಚ್1ಎನ್‌1 ಶಂಕೆ

7

ಮಹಿಳೆ ಸಾವು: ಎಚ್1ಎನ್‌1 ಶಂಕೆ

Published:
Updated:
Deccan Herald

ಮಂಡ್ಯ: ನಗರದ ಕಲ್ಲಹಳ್ಳಿ ಸಾವಿತ್ರಮ್ಮ (48) ಎಂಬುವರು ಮಂಗಳವಾರ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಾವಿಗೆ ಎಚ್1ಎನ್‌1 ಕಾರಣ ಎಂದು ಶಂಕಿಸಲಾಗಿದೆ. ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು.

‘ಮಹಿಳೆ ಸಾವಿಗೆ ಎಚ್1ಎನ್‌1 ಇರಬಹುದೆಂಬ ಶಂಕೆ ಕಂಡುಬಂದಿದ್ದು, ರಕ್ತದ ಮಾದರಿಯನ್ನು ಪರೀಕ್ಷೆಗೆ ಮಣಿಪಾಲ್‌ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ವರದಿ ಬರಲು ಕನಿಷ್ಠ ಮೂರ್ನಾಲ್ಕು ದಿನಗಳು ಬೇಕಾಗುತ್ತದೆ. ನಂತರ ಸ್ಪಷ್ಟ ಮಾಹಿತಿ ನೀಡಲಾಗುವುದು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ನಾಗರಾಜು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !