ಹಲಗೂರು: ಮೈಸೂರು ಕುವೆಂಪು ನಗರ ನಿವಾಸಿ ರಂಗಸ್ವಾಮಿ ಅವರ ಪುತ್ರ ರಮೇಶ್ (31) ಅವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಹಲಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಐದಾರು ವರ್ಷಗಳ ಹಿಂದೆ ಗಾರೆ ಕೆಲಸಕ್ಕಾಗಿ ಹಲಗೂರಿಗೆ ಬಂದಿದ್ದ ರಮೇಶ, ಇಲ್ಲಿಯೇ ಚಿಂದಿ ಆಯ್ದುಕೊಂಡು ಜೀವನ ನಡೆಸುತ್ತಿದ್ದರು.

ಶುಕ್ರವಾರ ರಾತ್ರಿ ಶಾಲಾ ಕೊಠಡಿಯ ಆವರಣದಲ್ಲಿ ಮಲಗಿದ್ದಾಗ ರಮೇಶ್ ಅವರ ತಲೆಯ ಮೇಲೆ ಯಾರೋ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿದ್ದಾರೆ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಬೆಳಿಗ್ಗೆ ಶಾಲೆ ತೆರೆಯಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.

ಘಟನಾ ಸ್ಥಳದಲ್ಲಿ ಶ್ವಾನದಳ ಮತ್ತು ವಿಧಿ ವಿಜ್ಞಾನ ಸಾಕ್ಷ್ಯ ಸಂಗ್ರಹಿಸುವ (ಸೋಕೋ) ತಂಡ ಭೇಟಿ ನೀಡಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಸ್.ಶ್ರೀಧರ್, ಪಿಎಸ್ಐ ಲೋಕೇಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.