ಹಲಗೂರು: ಕಳೆದ ಒಂದು ತಿಂಗಳಿನಿಂದ ರೈತರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಚಿರತೆ ಮಂಗಳವಾರ ತಡರಾತ್ರಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನ್ನಲ್ಲಿ ಸೆರೆಯಾಗಿದೆ.

ನಿಟ್ಟೂರು, ಕೊನ್ನಾಪುರ, ಜೂಗನಹಳ್ಳಿ, ಬೆನಮನಹಳ್ಳಿ, ಬಾಳೆಹೊನ್ನಿಗ, ಲಿಂಗಪಟ್ಟಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಚಿರತೆ ಹಸು, ಕುರಿ, ಮೇಕೆ, ನಾಯಿ , ಸಾಕು ಪ್ರಾಣಿಗಳನ್ನು ತಿಂದಿತ್ತು. ರೈತರಿಗೆ ಅಪಾರ ನಷ್ಟ ಉಂಟಾಗಿತ್ತು. ಜಮೀನಿಗೆ ತೆರಳಲು ಅತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಟ್ಟೂರು ಗ್ರಾಮದ ಚೌಡೇಗೌಡ ಅವರ ಜಮೀನಿನಲ್ಲಿ ಚಿರತೆ ಸೆರೆಗೆ ಬೋನ್ ಇಟ್ಟಿದ್ದರು. ಸುಮಾರು 3 ವರ್ಷದ ಹೆಣ್ಣು ಚಿರತೆ ಸೆರೆಯಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆಯನ್ನು ಸುರಕ್ಷಿತವಾಗಿ ಮಳವಳ್ಳಿ ವಲಯ ಅರಣ್ಯ ಅಧಿಕಾರಿಗಳ ಕಚೇರಿಗೆ ಸಾಗಿಸಿದರು. ಚಿರತೆಗೆ ವೈದ್ಯಕೀಯ ತಪಾಸಣೆ ನಡೆಸಿದ ನಂತರ ಉನ್ನತ ಅಧಿಕಾರಿಗಳ ಆದೇಶದಂತೆ ಕಾವೇರಿ ವನ್ಯಜೀವಿ ವಲಯದ ಅರಣ್ಯ ವಲಯಕ್ಕೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ವಲಯ ಅರಣ್ಯ ಅಧಿಕಾರಿ ಗವಿಯಪ್ಪ, ಉಪ ವಲಯ ಅರಣ್ಯ ಅಧಿಕಾರಿ ಆರ್.ಶ್ರೀಧರ್, ಗಸ್ತು ಅರಣ್ಯ ಪಾಲಕ ಕೃಷ್ಣ ಮತ್ತು ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.