ಹಂಪಾಪುರ: ಜೂನ್ 1ರಿಂದ ಶಾಲೆಗಳು ಆರಂಭವಾಗಲಿದ್ದು, ಒಂದು ವಾರದಿಂದ 2026-27ನೇ ಸಾಲಿನ ದಾಖಲಾತಿ ಆಂದೋಲನವನ್ನು ಶಿಕ್ಷಕರು ಭರದಿಂದ ನಡೆಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಿಬ್ಬಂದಿ, ಶಾಲೆಯ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು. ಗ್ರಾಮಗಳ ಪ್ರಮುಖ ರಸ್ತೆ, ವೃತ್ತಗಳಲ್ಲಿ ಶಾಲಾ ಶಿಕ್ಷಕರು ಆಟೋಗಳಲ್ಲಿ ಫ್ಲೆಕ್ಸ್ಗಳನ್ನು ಅಳವಡಿಸಿ ಆಂದೋಲನ ನಡೆಸಿದರು.

ಗ್ರಾಮೀಣ ಭಾಗದ ಪ್ರತಿಯೊಂದು ಮನೆಗೂ ಮಾಹಿತಿ ತಲುಪಿಸುವ ನಿಟ್ಟಿನಲ್ಲಿ ಅಟೊ ಮೂಲಕ ಧ್ವನಿವರ್ಧಕ (ಮೈಕ್) ಬಳಸಿ ಪ್ರಚಾರ ಕೈಗೊಳ್ಳಲಾಯಿತು. ಈ ವೇಳೆ ಶಾಲೆಯ ಸವಲತ್ತು ಮತ್ತು ವಿಶೇಷಗಳನ್ನು ಒಳಗೊಂಡ ಆಕರ್ಷಕ ಪೋಸ್ಟರ್ ಬಿಡುಗಡೆ ಮಾಡಿ, ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಿದರು. ಅಲ್ಲದೇ ಸರ್ಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳನ್ನು ಪಾಲಕರಿಗೆ ಮನವರಿಕೆ ಮಾಡಿಕೊಡಲಾಯಿತು.

ತಾಲ್ಲೂಕಿನ ಎಲ್ಲಾ ಸರ್ಕಾರಿ ಹಿರಿಯ, ಕಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬುಧವಾರ ಸ್ವಚ್ಛತೆ ಕಾರ್ಯ ನಡೆಸಲಾಯಿತು. ಶಾಲೆ ಮುಖ್ಯಶಿಕ್ಷಕಕರು, ಸಹ ಶಿಕ್ಷಕರು ಶಾಲೆಯ ಅಡುಗೆ ಸಿಬ್ಬಂದಿಯೊಂದಿಗೆ ಸ್ವಚ್ಛತೆಗೆ ಚಾಲನೆ ನೀಡಿದರು. ನಲ್ಲಿಗಳ ಅಳವಡಿಕೆ, ಚಾವಣಿಯ ನೀರು ಸರಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುತ್ತಿದ್ದುದು ಕಂಡುಬಂತು.

‘ಇಲಾಖೆಯ ಸೂಚನೆಯಂತೆ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜು ತಿಳಿಸಿದ್ದಾರೆ.

‘ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಗ್ರಾಮಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳನ್ನು ಕೂಡಲೇ ಕೈಗೊಳ್ಳಬೇಕು’ ಎಂದು ಕೋರಿದರು.

ಶಾಲೆಗಳಲ್ಲಿ ವಿದ್ಯುತ್ ಮತ್ತು ಫ್ಯಾನ್ಗಳು ಕೆಟ್ಟಿದ್ದರೆ ಕೂಡಲೇ ದುರಸ್ತಿ ಮಾಡಿಕೊಳ್ಳಬೇಕು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ಆದ್ಯತೆ ನೀಡಬೇಕು. ಶೌಚಾಲಯಗಳನ್ನು ಸ್ವಚ್ಛಗೊಳಿಸಿ ನೀರಿನ ವ್ಯವಸ್ಥೆಯೂ ಮಾಡಬೇಕು’ ಎಂದು ತಿಳಿಸಿದ್ದಾರೆ.

‘ಶಾಲೆಗಳಿಗೆ ಸರ್ಕಾರದಿಂದ ನೀಡಿರುವ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ಎಲ್ಲಾ ಶಾಲೆಗಳಿಗೂ ತಲುಪಿಸಿದ್ದು, ಜೂನ್ 1ರಂದು ಎಲ್ಲರೂ ಪೋಷಕರ ಸಭೆಯನ್ನು ಕರೆದು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಮತ್ತು ಎಸ್.ಡಿ.ಎಂ.ಸಿಯವರ ಮೂಲಕ ವಿತರಿಸಬೇಕು’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-38-1486281110

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.