ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಪತ್ರ ಮುದ್ರಿಸಿ ಕೃತಜ್ಞತೆ ಸಲ್ಲಿಸಿದ ಪರಾಜಿತ ಅಭ್ಯರ್ಥಿ

Last Updated 7 ಜನವರಿ 2021, 4:02 IST
ಅಕ್ಷರ ಗಾತ್ರ

ಮಳವಳ್ಳಿ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯೊಬ್ಬರು ಕೃತಜ್ಞತೆಯ ಕರಪತ್ರ ಮುದ್ರಿಸಿ ಮತದಾರರಿಗೆ ಹಂಚಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತಳಗವಾದಿ ಗ್ರಾಮ ಪಂಚಾಯಿತಿ ಟಿ.ಕಾಗೇಪುರ ಕ್ಷೇತ್ರದ ಅಭ್ಯರ್ಥಿ ಪಿ.ನಾಗರಾಜು ಕರಪತ್ರ ಮುದ್ರಿಸಿರುವ ವ್ಯಕ್ತಿ.

2015ರಲ್ಲಿ ಜೆಡಿಎಸ್ ಬೆಂಬಲಿತ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಪಿ.ನಾಗರಾಜು ಈ ಬಾರಿ ಅಧಿಕೃತ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 441 ಮತ ಪಡೆದು 53 ಮತಗಳ ಅಂತರದಿಂದ ಸೋತಿದ್ದರು.

ಕೃತಜ್ಞತಾ ಜಾಥಾ ನಡೆಸಿ ಗ್ರಾಮದ ಪ್ರತಿ ಮನೆಗೂ ತೆರಳಿ ಕರಪತ್ರ ಹಂಚಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗೂ ಅಭಿನಂದನೆ ಸಲ್ಲಿಸಿ ಅಭಿವೃದ್ಧಿಗೆ ಬೇಕಾದ ಸಹಕಾರ, ಸಲಹೆ ನೀಡುವುದಾಗಿ ತಿಳಿಸಿದ್ದಾರೆ.

ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಎಚ್.ಡಿ.ದೇವೇಗೌಡ, ಕುಮಾರ ಸ್ವಾಮಿಯಂಥ ರಾಜಕಾರಣಿಗಳೇ ಸೋತಿದ್ದಾರೆ. ಹೀಗಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಪಕ್ಷ ಸಂಘಟನೆಗೆ ಮುಂದಾಗುವೆ ಎಂದು ಪಿ.ನಾಗರಾಜು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT