ಮಂಗಳವಾರ, ಫೆಬ್ರವರಿ 18, 2020
31 °C

ಶ್ರೀರಂಗಪಟ್ಟಣ: ವಿದ್ಯಾರ್ಥಿಯ ಮರ್ಮಾಂಗ ಕತ್ತರಿಸಿದ ದುಷ್ಕರ್ಮಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಂಗಪಟ್ಟಣ: ಕಾಲೇಜಿಗೆ ಹೋಗಲು ಶುಕ್ರವಾರ ಬೆಳಿಗ್ಗೆ ಬಸ್‌ಗೆ ಕಾಯುತ್ತಿದ್ದ ವಿದ್ಯಾರ್ಥಿಯನ್ನು ಕಾರಿಗೆ ಹತ್ತಿಸಿಕೊಂಡ ದುಷ್ಕರ್ಮಿಗಳು, ಮಾರ್ಗಮಧ್ಯೆ ಇಳಿಸಿ ಆತನ ಮರ್ಮಾಂಗವನ್ನು ಕತ್ತರಿಸಿದ್ದಾರೆ.

ಪಾಂಡವಪುರ ತಾಲ್ಲೂಕಿನ ಗ್ರಾಮವೊಂದರ ಈ ವಿದ್ಯಾರ್ಥಿ ಕೆ.ಆರ್‌.ಪೇಟೆ ಪಾಲಿಟೆಕ್ನಿಕ್‌ಗೆ ತೆರಳಲು ಅರಳಕುಪ್ಪೆ ಗೇಟ್‌ ಬಳಿ ಬಸ್‌ಗಾಗಿ ಕಾಯುತ್ತಿದ್ದ. ಈ ವೇಳೆ ಕಾರಿನಲ್ಲಿ ಬಂದ ಮೂವರು ಕೆ.ಆರ್‌.ಪೇಟೆಗೆ ಹೋಗುತ್ತಿರುವುದಾಗಿ ಹೇಳಿ ಆತನನ್ನು ತಮ್ಮ ಕಾರಿನಲ್ಲಿ ಹತ್ತಿಸಿಕೊಂಡಿದ್ದಾರೆ. ಎಲೆಕೆರೆ ಗ್ರಾಮ ಮತ್ತು ಹ್ಯಾಂಡ್‌ಪೋಸ್ಟ್‌ ನಡುವೆ ವಾಹನ ನಿಲ್ಲಿಸಿ ಮರ್ಮಾಂಗವನ್ನು ಕತ್ತರಿಸಿ ಕೆಳಗೆ ತಳ್ಳಿ ಹೋಗಿದ್ದಾರೆ.

ಗಾಯಾಳು ವಿದ್ಯಾರ್ಥಿಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಬಿಳಿ ಬಣ್ಣದ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ಆತನಿಂದ ಯಾವುದೇ ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ. ಶನಿವಾರ ಆತನ ಹೇಳಿಕೆ ಪಡೆದು ಕ್ರಮ ಕೈಗೊಳ್ಳಲಾಗುವುದು. ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು