ಶ್ರೀರಂಗಪಟ್ಟಣದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು
ಮಾತು ತಪ್ಪಿದ ಎಚ್‌ಡಿಕೆ: ಆರೋಪ
‘ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ 24 ಗಂಟೆಗಳಲ್ಲಿ ಕೇಂದ್ರ ಸರ್ಕಾರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುವುದಾಗಿ ಹೇಳಿದ್ದ ಕುಮಾರಸ್ವಾಮಿ ಮಾತಿಗೆ ತಪ್ಪಿದ್ದಾರೆ’ ಎಂದು ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಟೀಕಿಸಿದರು. ‘ಕುಮಾರಸ್ವಾಮಿ ಮತ್ತು ಅವರ ಬಂಧುಗಳು ಬಿಡದಿ ಬಳಿ ಸರ್ಕಾರಿ ಭೂಮಿ ಕಬಳಿಸಿರುವುದು ಜಗಜ್ಜಾಹೀರಾಗಿದೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದವರು ವಕ್ಫ್ ತಿದ್ದುಪಡಿ ಮಸೂದೆಗೆ ಬೆಂಬಲ ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ಏನು ಕೊಟ್ಟಿದ್ದಾರೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ’ ಎಂದು ಸವಾಲು ಹಾಕಿದರು.