ಶ್ರೀರಂಗಪಟ್ಟಣ: ‘ಗೃಹಲಕ್ಷ್ಮಿ ಯೋಜನೆಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದೆ. ನಾನು ಸಿಎಂ ಸ್ಥಾನದಲ್ಲಿದ್ದರೆ ತೆರಿಗೆಯ ಹೊರೆ ಹೊರಿಸದೆ ಮಹಿಳೆಯರಿಗೆ ತಿಂಗಳಿಗೆ ₹5 ಸಾವಿರ ಕೊಡುತ್ತಿದ್ದೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ತಾಲ್ಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ಜೀರ್ಣೋದ್ಧಾರ ಮಾಡಿರುವ ತಿರುಮಲ ವೆಂಕಟರಮಣಸ್ವಾಮಿ ದೇವಾಲಯ ಮತ್ತು ಸಮುದಾಯ ಭವನ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಅವರು ಮಾತನಾಡಿದರು. ‘ಸರ್ಕಾರ ಮದ್ಯದ ಬೆಲೆಯನ್ನು ಯದ್ವಾತದ್ವಾ ಏರಿಸಿದೆ. ವಿದ್ಯುತ್ ಬೆಲೆ ಹೆಚ್ಚಳಕ್ಕೆ ಮುಂದಾಗಿದೆ. ಅಗತ್ಯ ವಸ್ತುಗಳ ಬೆಲೆ ಕೂಡ ಏರುತ್ತಿದೆ. ರಾಜ್ಯದಲ್ಲಿ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ. ಸರ್ಕಾರದ ನಡೆಗೆ ರಾಜ್ಯದ ಜನರು ಭ್ರಮನಿರಸನರಾಗಿದ್ದಾರೆ. ಜನ ವಿರೋಧಿ ಸರ್ಕಾರವನ್ನು ಕಿತ್ತೊಗೆಯಲು ಪಣ ತೊಟ್ಟಿದ್ದೇನೆ’ ಎಂದರು.

‘ನನಗೆ ಐದು ವರ್ಷ ಅಧಿಕಾರ ಸಿಕ್ಕಿದರೆ ಪ್ರಾಥಮಿಕ ಹಂತದಿಂದ ಪಿಯು ಹಂತದ ವರೆಗೆ ಉಚಿತ ಶಿಕ್ಷಣ ಕೊಡುತ್ತೇನೆ. ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುವಂತೆ ಮಾಡುತ್ತೇನೆ. ಮುಖ್ಯಮಂತ್ರಿಯಾಗಿದ್ದ ವೇಳೆ ₹25 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದು, ಮಂಡ್ಯ ಜಿಲ್ಲೆಯ ರೈತರ ₹800 ಕೋಟಿ ಸಾಲ ಮನ್ನಾಗಿದೆ. ರೈತ ಬಗೆಗಿನ ನನ್ನ ಕಾಳಜಿ ಪ್ರಶ್ನಾತೀತವಾದುದು’ ಎಂದು ಹೇಳಿದರು.

‘ದೇವೇಗೌಡರು ರಾಜ್ಯದ ಜನರಿಗೆ ಆಗುತ್ತಿರುವ ಅನ್ಯಾಯ ಕಂಡು ರಾಜ್ಯ ಸಭೆಯಲ್ಲಿ ಕಣ್ಣೀರು ಹಾಕಿದ್ದಾರೆ. ಈ ಇಳಿ ವಯಸ್ಸಿನಲ್ಲೂ ಅವರು ತೋರಿರುವ ಕಳಕಳಿಗೆ ದೇಶದ ಹಿರಿಯ ರಾಜಯಕಾರಣಿಗಳೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ’ ಎಂದರು.

‘ನರೇಂದ್ರ ಮೋದಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ಎರಡು ಬೃಹತ್ ಖಾತೆಗಳನ್ನು ಕೊಟ್ಟಿದ್ದಾರೆ. ಅವುಗಳನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ. ಇಂದು ಕೂಡ ದೆಹಲಿಯಲ್ಲಿ ದೊಡ್ಡ ಬಂಡವಾಳ ಹೂಡುವವರ ಸಭೆ ನಡೆಸುತ್ತಿದ್ದೇನೆ’ ಎಂದರು.

‘ಪಾಲಹಳ್ಳಿಯ ತಿರುಮಲ ವೆಂಕಟರಮಣಸ್ವಾಮಿ ದೇವಾಲಯಕ್ಕೆ ₹10 ಲಕ್ಷ ಅನುದಾನ ಕೊಟ್ಟಿದ್ದು ಇನ್ನೂ ₹10 ಲಕ್ಷ ಕೊಡಿ’ ಎಂಬ ಜೆಡಿಎಸ್ ಮುಖಂಡ ಪಿ.ಎಚ್. ಚಂದ್ರಶೇಖರ್ ಅವರ ಮನವಿಗೆ ಸ್ಪಂದಿಸಿದ ಎಚ್.ಡಿ. ಕುಮಾರಸ್ವಾಮಿ ಹೆಚ್ಚುವರಿ ಅನುದಾನ ನೀಡುವ ಭರವಸೆ ನೀಡಿದರು. ‘ತಾಲ್ಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಕೃಷಿಕ ಸಮಾಜ ಭವನಕ್ಕೂ ಅನುದಾನ ಕೊಡುತ್ತೇನೆ’ ಎಂದು ಸಮಾಜದ ಅಧ್ಯಕ್ಷ ಕಡತನಾಳು ಬಾಲಕೃಷ್ಣ ಮತ್ತು ಪದಾಧಿಕಾರಿಗಳ ಮನವಿಗೆ ಅವರು ಪ್ರತಿಕ್ರಿಯಿಸಿದರು.

ವಿಧಾನ ಪರಿಷತ್ ಸದಸ್ಯ ಕೆ. ವಿವೇಕಾನಂದ, ಜಿ.ಪಂ. ಮಾಜಿ ಅಧ್ಯಕ್ಷ ಎಸ್. ಲಿಂಗಣ್ಣ, ಕೃಷಿಕ ಸಮಾಜದ ಮಾಜಿ ಅಧ್ಯಕ್ಷ ಪಿ. ಗಿರೀಗೌಡ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ. ರಮೇಶ್, ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಪೈ. ಮುಕುಂದ, ಮುಖಂಡರಾದ ನಾಗರಾಜು, ದೇವರಾಜು, ಕೃಷ್ಣಪ್ಪ, ಶಂಕರೇಗೌಡ, ಸಂಜೀವಕುಮಾರ್, ಟೆಂಪೋ ಪ್ರಕಾಶ್, ನಗುವನಹಳ್ಳಿ ಶಿವಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.