ನಾಗಮಂಗಲ (ಮಂಡ್ಯ ಜಿಲ್ಲೆ): ‘ಜಿಲ್ಲೆಯು ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದ್ದು, ಒಂದು ಸಾವಿರ ಕೋಟಿ ವೆಚ್ಚದಲ್ಲಿ ಕನಿಷ್ಠ ಎರಡು ಕೈಗಾರಿಕೆಗಳನ್ನು ತರಲು ತೀರ್ಮಾನಿಸಿದ್ದೇನೆ. ಶ್ರೀ ಕಾಲಭೈರವನ ಈ ಸನ್ನಿಧಿಯಲ್ಲಿ ನಿಂತು ಧೈರ್ಯದಿಂದ ಹೇಳುತ್ತಿದ್ದೇನೆ. ಹೇಳಿದ ಕೆಲಸವನ್ನು ತಪ್ಪದೇ ಮಾಡುತ್ತೇನೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಶುಕ್ರವಾರ ವಿಜ್ಞಾತಂ ಉತ್ಸವದಲ್ಲಿ ವಿಜ್ಞಾನಿ ಎಂ.ಕೆ.ಸೂರಪ್ಪ ಅವರಿಗೆ ಆದಿಚುಂಚನಗಿರಿ ಕ್ಷೇತ್ರ ನೀಡುವ ‘ವಿಜ್ಞಾತಂ 2026’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

‘ಜಿಲ್ಲೆಯ ಜನರ ಆಶೀರ್ವಾದ ನನ್ನ ಮೇಲಿದೆ. ಯಾವುದೇ ಕಾರಣಕ್ಕೂ ದ್ರೋಹ ಬಗೆಯದೆ ಕೆಲಸ ಮಾಡುತ್ತೇನೆ. ನನ್ನ ಕೆಲಸಗಳ ಬಗ್ಗೆ ಜಾಹೀರಾತು ಹಾಕಿಸಿ ಪ್ರಯೋಜನ ಪಡೆಯಲು ಬಯಸುವುದಿಲ್ಲ. ನನ್ನ ಕೆಲಸವನ್ನು ದೇವರು ನೋಡುತ್ತಾನೆ. ಭದ್ರಾವತಿ ಉಕ್ಕು ಕಾರ್ಖಾನೆ, ಎಚ್ಎಂಟಿ ಕಾರ್ಖಾನೆ ಶೀಘ್ರದಲ್ಲಿ ಪುನಶ್ಚೇತನಗೊಳಿಸಲಾಗುವುದು’ ಎಂದು ವಿಶ್ವಾಶ ವ್ಯಕ್ತಪಡಿಸಿದರು.

‘ಆಧ್ಯಾತ್ಮದ ಜೊತೆಗೆ ವಿಜ್ಞಾನ ತಂತ್ರಜ್ಞಾನದ ವಿಷಯದಲ್ಲೂ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಯುವಪೀಳಿಗೆಗೆ ಮಾರ್ಗದರ್ಶಕರಾಗಿದ್ದಾರೆ’ ಎಂದರು.

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸಬೇಕಾಗಿಲ್ಲ. ಪರಸ್ಪರ ಟೀಕೆ ದೋಷಾರೋಪವೂ ಅಗತ್ಯವಿಲ್ಲ. ಎಲ್ಲರೂ ಸೇರಿ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯೋಣ.
ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.