ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿವಿಧ ಮಠಗಳಿಗೆ ಎಚ್‌ಡಿಕೆ ಸಹೋದರ ಭೇಟಿ

Published 10 ಏಪ್ರಿಲ್ 2024, 13:31 IST
Last Updated 10 ಏಪ್ರಿಲ್ 2024, 13:31 IST
ಅಕ್ಷರ ಗಾತ್ರ

ಬೆಳಕವಾಡಿ: ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಮಠ, ಬೋಪ್ಪೇಗೌಡನಪುರ (ಬಿಜಿಪುರ)ದ ಹೊರಮಠ, ಮಂಟೇಸ್ವಾಮಿ ಮಠ, ಸರಗೂರು ಹೊರಮಠ, ಕುಂದೂರು ಮಠ ಸೇರಿದಂತೆ ವಿವಿಧ ಮಠಗಳಿಗೆ ಬುಧವಾರ ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರ ಸಹೋದರ ಎಚ್.ಡಿ.ರಮೇಶ್ ಭೇಟಿ ನೀಡಿ ಮಠಾಧೀಶರ ಆಶೀರ್ವಾದ ಪಡೆದುಕೊಂಡರು.

ಬಳಿಕ ಮಾತನಾಡಿದ ಅವರು, ‘ಮಂಡ್ಯ ಕ್ಷೇತ್ರದಿಂದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ನನ್ನ ಸಹೋದರ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದಾರೆ. ಯಾವುದೇ ಒಳ್ಳೆಯ ಕೆಲಸ ಮಾಡಬೇಕಾದರೆ ಗುರು ಹಿರಿಯರ ಆಶೀರ್ವಾದ ಬೇಕು. ಹೀಗಾಗಿ ವಿವಿಧ ಮಠಗಳ ಮಠಾಧೀಶರ ಆಶೀರ್ವಾದ ಪಡೆಯಲು ಮಠಗಳಿಗೆ ಭೇಟಿ ನೀಡುತ್ತಿದ್ದೇವೆ. ಮಂಡ್ಯದ ಜನರು ನನ್ನ ಸಹೋದರ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಂಪೂರ್ಣವಾಗಿ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸ ನನಗಿದೆ’ ಎಂದರು.

ಜೆಡಿಎಸ್ ಎಸ್ಸಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಕೆ.ಅನ್ನದಾನಿ ಮಾತನಾಡಿ, ‘ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಗೆಲುವು ಸಾಧಿಸಿ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಲಿದ್ದು, ಮಳವಳ್ಳಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದ್ದಾರೆ’ ಎಂದರು.

ನಂತರ ಮಳವಳ್ಳಿ ತಾಲ್ಲೂಕಿನ ನೆಲ್ಲಿಗೆರೆ, ಹಂಗ್ರಾಪುರ, ರಾಗಿಬೊಮ್ಮನಹಳ್ಳಿ ಮಠಗಳಿಗೂ ಸಹ ಭೇಟಿ ನೀಡಿದರು ‌

ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಿ.ರವಿ ಕಂಸಾಗರ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್. ಕೃಷ್ಣ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಎಂ. ವಿಶ್ವನಾಥ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಮೋಹನ್, ಮುಖಂಡರಾದ ಶಿವಲಿಂಗಸ್ವಾಮಿ, ಜಯರಾಮ್, ಬೂವಳ್ಳಿ ಸದಾನಂದ, ಪ್ರಭುಸ್ವಾಮಿ, ಅಶೋಕ್, ಬಸವರಾಜು, ಪುಟ್ಟಬುದ್ದಿ, ಮಲ್ಲೇಗೌಡ, ಜಯಶೀಲಾ, ಪ್ರಭಾಕರ್, ಕೆ.ಟಿ.ಉಮಾ, ಗಿರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT