ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಚ್‌ಡಿಕೆ ಹೇಳಿಕೆ ತಿರುಚಿ ಅಪಪ್ರಚಾರ; ಕೆ.ಅನ್ನದಾನಿ ಕಿಡಿ

ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮಾವೇಶ; ಎಚ್.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ ಭಾಗಿ
Published 15 ಏಪ್ರಿಲ್ 2024, 13:45 IST
Last Updated 15 ಏಪ್ರಿಲ್ 2024, 13:45 IST
ಅಕ್ಷರ ಗಾತ್ರ

ಮಳವಳ್ಳಿ: ‘ಪಟ್ಟಣದ ಭಕ್ತಕನಕದಾಸ ಕ್ರೀಡಾಂಗಣದಲ್ಲಿ ಏ.16ರಂದು ಬೆಳಿಗ್ಗೆ 11 ಗಂಟೆಗೆ ಜೆಡಿಎಸ್-ಬಿಜೆಪಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ’ ಎಂದು ಜೆಡಿಎಸ್ ಎಸ್ಸಿ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಕೆ.ಅನ್ನದಾನಿ ತಿಳಿಸಿದರು.

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಬಿಜೆಪಿ ಮುಖಂಡರ ಜೊತೆಗೆ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

‘ಜಿಲ್ಲೆಯ ರೈತರ, ಕಾವೇರಿಯ ಉಳಿವು ಹಾಗೂ ಸಮಗ್ರ ಅಭಿವೃದ್ಧಿಗಾಗಿ ಜನರು ಮತ್ತು ನಾಯಕರ ಒತ್ತಾಯದಂತೆ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಎರಡು ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗೂಡಿ ಪ್ರಚಾರ ನಡೆಸುತ್ತಿದ್ದೇವೆ. ಜನಪರ ಕಾರ್ಯಕ್ರಮಗಳನ್ನು ಕೊಟ್ಟಿರುವ ಎಚ್.ಡಿ.ಕುಮಾರಸ್ವಾಮಿ ಅವರ ಗೆಲುವು ಈಗಾಗಲೇ ಖಚಿತವಾಗಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಏ.16ರಂದು ಬೆಳಿಗ್ಗೆ 11ಗಂಟೆಗೆ ನಡೆಯುವ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಮೈತ್ರಿಕೂಟದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸುವವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಶಾಸಕ ಎಚ್.ಟಿ.ಮಂಜು, ಮುಖಂಡರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಕೆ.ಟಿ.ಶ್ರೀಕಂಠೇಗೌಡ, ಬಿ.ಆರ್.ರಾಮಚಂದ್ರು ಸೇರಿದಂತೆ ಅನೇಕ ನಾಯಕರು ಭಾಗಿಯಾಗಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಹೆಣ್ಣು ಮಕ್ಕಳ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿರುವ ಕುಮಾರಸ್ವಾಮಿ ಅವರ ಹೇಳಿಕೆಯನ್ನು ರಾಜಕೀಯ ಉದ್ದೇಶಕ್ಕಾಗಿ ಕಾಂಗ್ರೆಸ್ ನವರು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಈಗಾಗಲೇ ಅವರು ಸ್ಪಷ್ಟನೆ ನೀಡಿದ್ದು, ಇಂಥ ಸುಳ್ಳುಗಳಿಂದ ಅವರನ್ನು ಸೋಲಿಸಲು ಅಸಾಧ್ಯ ಎನ್ನುವುದನ್ನು ನಮ್ಮ ವಿರೋಧಿಗಳು ಅರ್ಥಮಾಡಿಕೊಳ್ಳಬೇಕು’ ಎಂದು ಕಿಡಿಕಾರಿದರು.

ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಿ.ರವಿ ಕಂಸಾಗರ, ತಾಲ್ಲೂಕು ಘಟಕದ ಅಧ್ಯಕ್ಷ ವಿ.ಎಂ.ವಿಶ್ವನಾಥ್, ಮಹಿಳಾ ಘಟಕದ ಪದ್ಮಮ್ಮ, ಉಮಾ, ಅನಿತಾ, ಮುಖಂಡರಾದ ಮಲ್ಲೇಗೌಡ, ಕನ್ನಹಳ್ಳಿ ಸುಂದ್ರಪ್ಪ, ಪುಟ್ಟರಾಮು, ಸತೀಶ್, ನಾಗರಾಜು, ಕಾಂತರಾಜು ಇದ್ದರು.

ಬಿಜೆಪಿ ಮುಖಂಡ ಜಿ.ಮುನಿರಾಜು ಮಾತನಾಡಿ, ‘ಕೆಲ ಕಿಡಿಗೇಡಿಗಳು ನಾನು ಸ್ಟಾರ್ ಚಂದ್ರು ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಬುಕ್ ಆಗಿದ್ದೇನೆ ಎಂದು ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ, ನನ್ನ ಉಸಿರು ಇರುವವರೆಗೂ ನಾನು ಬಿಜೆಪಿಯಲ್ಲಿಯೇ ಇರುವೆ. ಯಾರೂ ಬಳಿ ಒಂದು ನಯಾಪೈಸೆ ಪಡೆದಿಲ್ಲ, ಇಒನ್ನೊಬ್ಬರ ಹಣಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ, ನಂಬಿಕೆ ದ್ರೋಹದ ಕೆಲಸ ಮಾಡುವುದಿಲ್ಲ, ವಿಧಾನಸಭಾ ಚುನಾವಣೆಯಲ್ಲೂ ಇಂಥ ಅಪಪ್ರಚಾರ ಹಾಗೂ ಜೆಡಿಎಸ್-ಬಿಜೆಪಿ ಎಡವಟ್ಟಿನಿಂದ ನಮ್ಮ ಎದುರಾಳಿಗೆ ಅಷ್ಟೊಂದು ದೊಡ್ಡ ಅಂತರದಿಂದ ಗೆಲುವು ಸಿಕ್ಕಿದೆ’  ಎಂದು ಬೇಸರ ವ್ಯಕ್ತಪಡಿಸಿದರು.

ಏ.16ರ ಸಮಾವೇಶಕ್ಕೆ ತಾಲ್ಲೂಕಿನ ಬಿಜೆಪಿಯ 10 ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಲಿದ್ದು, ಕುಮಾರಣ್ಣ ಅವರ ಗೆಲುವುದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT