ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮದ್ದೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ, ಮುಖ್ಯಶಿಕ್ಷಕನ ಬಂಧನ

Published : 17 ಸೆಪ್ಟೆಂಬರ್ 2023, 23:30 IST
Last Updated : 17 ಸೆಪ್ಟೆಂಬರ್ 2023, 23:30 IST
ಫಾಲೋ ಮಾಡಿ
Comments

ಮದ್ದೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿಯಲ್ಲಿ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಶಿವರಾಂ (55) ಅವರನ್ನು ಮದ್ದೂರು ಪೊಲೀಸರು ಶನಿವಾರ ಶಾಲೆಯಲ್ಲೇ ಬಂಧಿಸಿದರು. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಶಿಕ್ಷಣ ಇಲಾಖೆಯ ಅನ್ನದಾಸೋಹ ಸಹಾಯಕ ನಿರ್ದೇಶಕಿ ಮಂಗಳಮ್ಮ ಸ್ಥಳಕ್ಕೆ ಭೇಟಿ ನೀಡಿ ಪೋಷಕರು ಹಾಗೂ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದು ನಂತರ ದೂರು ನೀಡಿದರು.

‘ಶಾಲೆಯಲ್ಲಿ ನಿತ್ಯವೂ ಲೈಂಗಿಕ ಕಿರುಕುಳ ನೀಡುವ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದರು‌. ವಿದ್ಯಾರ್ಥಿನಿಯರ ದೇಹ ಸ್ಪರ್ಶಿಸಿ, ಅಸಭ್ಯ ಭಾಷೆ ಬಳಸುತ್ತಿದ್ದರು. ಕೆಲವೊಮ್ಮೆ ಬೈಕ್‌ನಲ್ಲಿ ಹೊರಗೆ ಕರೆದೊಯ್ಯುತ್ತಿದ್ದರು’ ಎಂದು ಪೋಷಕರು ಆರೋಪಿಸಿದ್ದಾರೆ.

‘ದುರ್ವರ್ತನೆ ಕುರಿತು ಮಕ್ಕಳು ಪೋಷಕರಿಗೆ ತಿಳಿಸಿದ್ದರು. ತಕ್ಷಣವೇ ಅವರು ಬಂದು ಇತರ ಶಿಕ್ಷಕರ ಗಮನಕ್ಕೆ ತಂದಿದ್ದರು’ ಎನ್ನಲಾಗಿದೆ. ಆದರೂ ದುರ್ವರ್ತನೆ ಮುಂದುವರಿದಿದ್ದರಿಂದ ಪೊಲೀಸರ ಗಮನಕ್ಕೆ ತರಲಾಯಿತು. ಪಿಎಸ್ಐ ಉಮೇಶ್ ನೇತೃತ್ವದ ತಂಡವು ಮುಖ್ಯ ಶಿಕ್ಷಕರನ್ನು ಬಂಧಿಸಿ ಠಾಣೆಗೆ ಕರೆ ತಂದು ವಿಚಾರಣೆ ನಡೆಸಿತು. ಸ್ಥಳದಲ್ಲಿ ಜಮಾಯಿಸಿದ್ದ ಸ್ಥಳೀಯರು ಮುಖ್ಯ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು.

‘ಮುಖ್ಯ ಶಿಕ್ಷಕರನ್ನು ಅಮಾನತು ಮಾಡಿ, ಶಿಕ್ಷೆಗೆ ಒಳಪಡಿಸಬೇಕು’ ಎಂದು ಸ್ಥಳೀಯ ಮುಖಂಡ ಪ್ರಕಾಶ್ ಆಗ್ರಹಿಸಿದರು.

ನಿಡಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ.
ನಿಡಘಟ್ಟ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT