ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಂತರ ಮಳೆ: ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ

Last Updated 2 ಆಗಸ್ಟ್ 2022, 4:13 IST
ಅಕ್ಷರ ಗಾತ್ರ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕೆಆರ್‌ಎಸ್‌ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ.

ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟ (124.80 ಅಡಿ) ತಲುಪಿದ್ದು ಬಂದಷ್ಟು ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಮಂಗಳವಾರ ಬೆಳಿಗ್ಗೆ 6 ಗಂಟೆಯ ವೇಳೆಗೆ ಜಲಾಶಯಕ್ಕೆ ಒಳಹರಿವು 23,774 ಕ್ಯುಸೆಕ್‌ ಇದೆ, ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ 20ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT