ಕೆ.ಆರ್.ಪೇಟೆ: ಹೇಮಾವತಿ ಜಲಾಶಯದಿಂದ ಎಡದಂಡೆ ಕಾಲುವೆ ಮುಖಾಂತರ ನೀರುಹರಿಸಿ ಜಿಲ್ಲೆಯ ಎಲ್ಲಾ ಕೆರೆ ಕಟ್ಟೆಗಳನ್ನು ತುಂಬಿಸಲು ಕ್ರಮ ವಹಿಸಬೇಕು ಎಂದು ರೈತಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ ಆಗ್ರಹಿಸಿದರು.

‘ಹೇಮಾವತಿ ಜಲಾಶಯದ ಎಡದಂಡೆ ನಾಲೆಯ ಮುಖಾಂತರ ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳಿಗೆ ನೀರು ಹರಿಯುತ್ತದೆ. ತುಮಕೂರು ಭಾಗದ ನಾಲೆ 2400 ಕ್ಯುಸೆಕ್ ನೀರು ಹರಿಸುವ ಸಾಮರ್ಥ್ಯ ಹೊಂದಿದ್ದರೆ ಮಂಡ್ಯ ಜಿಲ್ಲೆಗೆ ನೀರೊದಗಿಸುವ ನಾಲೆ 1200 ಕ್ಯುಸೆಕ್ ಸಾಮರ್ಥ್ಯ ಹೊಂದಿದೆ. ಜಿಲ್ಲೆಯ ಕೆ.ಆರ್.ಪೇಟೆ, ನಾಗಮಂಗಲ, ಪಾಂಡವಪುರ ಮತ್ತು ಮಂಡ್ಯ ತಾಲೂಕಿನ ಕೆಲವು ಬರಪೀಡಿತ ಪ್ರದೇಶಗಳಿಗೆ ಹೇಮಾವತಿ ಎಡದಂಡೆ ನಾಲೆಯ ನೀರು ಹರಿಯುತ್ತದೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಪ್ರಸ್ತುತ ಹೇಮಾವತಿ ಜಲಾಶಯದಲ್ಲಿ 19 ಟಿ.ಎಂ.ಸಿ ನೀರು ಸಂಗ್ರಹವಿದ್ದು, 6 ಟಿ.ಎಂ.ಸಿ ನೀರು ಡೆಡ್ ಸ್ಟೋರೇಜ್ ಆಗಿದ್ದು ಉಳಿದ 13 ಟಿ.ಎಂ.ಸಿ ನೀರು ಬಳಕೆಗೆ ಅರ್ಹವಾಗಿದೆ. ಇದರಲ್ಲಿ ಕೇವಲ 3 ಟಿ.ಎಂ.ಸಿ ನೀರನ್ನು ಕಾಲುವೆಗಳ ಮೂಲಕ ಹರಿಸಿದರೆ ಮಂಡ್ಯ ಹಾಹೂ ತುಮಕೂರು ಭಾಗದ ಕೆರೆ-ಕಟ್ಟೆಗಳನ್ನು ತುಂಬಿಸಿ ಜನ-ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬಹುದಾಗಿದೆ’ ಎಂದು ಸಲಹೆ ನೀಡಿದ್ದಾರೆ.

‘ತುಮಕೂರಿಗೆ ನೀರು ಹರಿಸಲು ಗೃಹ ಸಚಿವ ಜಿ.ಪರಮೇಶ್ವರ್ ಬದ್ಧತೆ ಪ್ರದರ್ಶಿಸುತ್ತಿರುವಂತೆ ಜಿಲ್ಲೆಯ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಮೇಲುಕೋಟೆ, ಕೆ.ಆರ್.ಪೇಟೆ ಶಾಸಕರು ಬದ್ಧತೆ ಪ್ರದರ್ಶಿಸಬೇಕು. ಆದರೆ ಅವರು ಧ್ವನಿ ಎತ್ತುತ್ತಿಲ್ಲ. ನಾಗಮಂಗಲ ತಾಲ್ಲೂಕು ಸಂಪೂರ್ಣ ಹೇಮಾವತಿ ಜಲಾನಯನ ಪ್ರದೇಶಕ್ಕೆ ಒಳಪಟ್ಟಿದ್ದು, ತಮ್ಮ ಕ್ಷೇತ್ರದ ರೈತರ ಹಿತಾಸಕ್ತಿಯನ್ನು ಕಾಪಾಡುವುದಕ್ಕಾದರೂ ಸಚಿವ ಎನ್.ಚಲುವರಾಯಸ್ವಾಮಿ ಹೇಮಾವತಿ ನೀರಿನ ಬಗ್ಗೆ ಧ್ವನಿ ಎತ್ತಬೇಕು. ಪ್ರತಿ ಬೇಸಿಗೆಯಲ್ಲೂ ಹೇಮೆಯ ನೀರಿಗಾಗಿ ರೈತಸಂಘ ಬೀದಿ ಹೋರಾಟ ಮಾಡಬೇಕಾದ ಅನಿವಾರ್ಯತೆಯನ್ನು ನಮ್ಮ ಭಾಗದ ಶಾಸಕರು ನಿರ್ಮಿಸಿರುವುದು ನಾಚಿಕೆಗೇಡಿನ ವಿಚಾರ. ರೈತಸಂಘ ಬೀದಿಗಿಳಿಯುವ ಮುನ್ನ ಹೇಮಾವತಿ ನೀರಿನಿಂದ ತಾಲ್ಲೂಕಿನ ಕೆರೆ-ಕಟ್ಟೆಗಳನ್ನು ತುಂಬಿಸಲು ಕ್ರಮವಹಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-40-1688999879

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.