ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ಇಲಾಖೆಯ ಹೆಚ್ಚುವರಿ ಜಮೀನನ್ನು ಮುಳುಗಡೆ ಸಂತ್ರಸ್ತರಿಗೆ ವಿತರಿಸಲು ಕ್ರಮ

ಅರಣ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಸಂದೀಪ್ ದುವೆ ಸೂಚನೆ
Last Updated 18 ಜನವರಿ 2020, 13:50 IST
ಅಕ್ಷರ ಗಾತ್ರ

ಕೆ. ಆರ್.ಪೇಟೆ: ‘ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಅರಣ್ಯ ಇಲಾಖೆಯ ಹೆಚ್ಚುವರಿ ಜಮೀನನ್ನು ಮುಳುಗಡೆ ಸಂತ್ರಸ್ತರಿಗೆ ವಿತರಿಸಲು ಅಗತ್ಯ ಕ್ರಮ ವಹಿಸುವಂತೆ’ ಅರಣ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಸಂದೀಪ್ ದುವೆ ಸೂಚಿಸಿದರು.

ತಾಲ್ಲೂಕಿನ ಬೆಳ್ಳಿಬೆಟ್ಟದ ಕಾವಲು ಅರಣ್ಯ ಪ್ರದೇಶದಲ್ಲಿ ಹೇಮಾವತಿ ಜಲಾಶಯ ಯೋಜನೆಯ ಮುಳುಗಡೆ ಸಂತ್ರಸ್ತರಿಗೆ ನೀಡಲು ಗುರುತಿಸಲಾಗಿರುವ ಪ್ರದೇಶಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಉಪವಿಭಾಗಾಧಿಕಾರಿ ಶೈಲಜಾ, ತಹಶೀಲ್ದಾರ್ ಶಿವಮೂರ್ತಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಭೂಮಿ ಪರಿಶೀಲನೆ ನಡೆಸಿದ ಅವರು, ಸಂತ್ರಸ್ತರಿಗೆ ಬದಲಿ ಭೂಮಿಯನ್ನು ಒದಗಿಸುವುದು ನಮ್ಮ ಕರ್ತವ್ಯ. ಆದ್ದರಿಂದ ಬೆಳ್ಳಿಬೆಟ್ಟದ ಸರ್ವೆ ನಂಬರ್ 1 ಅನ್ನು ಅಳತೆ ಮಾಡಿಸಿ ಇಲಾಖೆಗೆ ಉಳಿಯಬೇಕಾದ ಭೂಮಿ ಉಳಿಸಿ ಹೆಚ್ಚುವರಿ ಭೂಮಿಯನ್ನು ನೀಡಿ ಎಂದು ಹೇಳಿದರು.

‘ಕಂದಾಯ ಇಲಾಖೆಯ ವತಿಯಿಂದ ಆದೇಶ ಪಡೆದು ಕೃಷಿ ಭೂಮಿಯಲ್ಲಿ ಬೇಸಾಯ ಮಾಡುತ್ತಿರುವ ರೈತರಿಗೆ ತೊಂದರೆ ನೀಡುವುದು ಬೇಡ. ಆದರೆ, ಸುಳ್ಳು ದಾಖಲಾತಿಗಳನ್ನು ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಸೃಷ್ಟಿಸಿರುವ ಬಗ್ಗೆ ದೂರುಗಳು ಬಂದಿರುವುದರಿಂದ ಈ ಬಗ್ಗೆ ನಿಗಾ ವಹಿಸುವಂತೆ’ ಸೂಚಿಸಿದರು.

ಮುಳುಗಡೆ ಸಂತ್ರಸ್ತ ರೈತರ ಪರವಾಗಿ ಮಾತನಾಡಿದ ತಾ.ಪಂ. ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಎಂ.ವಿ.ನಾಗೇಗೌಡ, ಹಾಸನ ರವಿ ‘ಮಾನವೀಯ ನೆಲೆಗಟ್ಟಿನಲ್ಲಿ ಮುಳುಗಡೆ ರೈತರ ನೋವಿಗೆ ಸ್ಪಂದಿಸಿ ದೊರೆಯಬೇಕಾದ ಸೌಲಭ್ಯವನ್ನು ನೀಡಿ’ ಎಂದು ಮನವಿ ಮಾಡಿದರು.

ಸಿಪಿಐ ಕೆ.ಎನ್.ಸುಧಾಕರ್, ಕಸಬಾ ಹೋಬಳಿಯ ಕಂದಾಯ ನಿರೀಕ್ಷಕಿ ಚಂದ್ರಿಕಾ, ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು, ಸಂತ್ರಸ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT