ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಂಡವಪುರ|ಪತ್ನಿ ಕೊಂದು ಪತಿ ಪರಾರಿ

Published 31 ಜುಲೈ 2023, 15:37 IST
Last Updated 31 ಜುಲೈ 2023, 15:37 IST
ಅಕ್ಷರ ಗಾತ್ರ

ಪಾಂಡವಪುರ: ತಾಲ್ಲೂಕಿನ ಹುಲ್ಕೆರೆ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಸೌಮ್ಯ (23) ಕೊಲೆಯಾದವರು. ಆರೋಪಿ ಎಚ್.ಪಿ.ಗಣೇಶ್ (33) ಘಟನೆ ನಂತರ ತಲೆಮರೆಸಿಕೊಂಡಿದ್ದಾನೆ.

ನಂಜನಗೂಡು ತಾಲ್ಲೂಕಿನ ಕೊಂಗಳ್ಳಿ ಗ್ರಾಮದ ಸೌಮ್ಯ ಅವರು 6 ವರ್ಷದ ಹಿಂದೆ ಹುಲ್ಕೆರೆ ಗ್ರಾಮದ ಗಣೇಶ ಅವರನ್ನು ವರಿಸಿದ್ದರು. ಇವರಿಗೆ 4 ವರ್ಷದ ಗಂಡು ಮಗು ಇದೆ.

ಕೌಟುಂಬಿಕ ವಿಚಾರವಾಗಿ ಇಬ್ಬರ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು ಎಂದು ಹೇಳಲಾಗುತ್ತಿದೆ. ಸೋಮವಾರವೂ ಕೂಡ ಜಗಳ ನಡೆದು, ಕೋಪದಿಂದ ಗಂಡ ಕಬ್ಬಿಣದ ಆಯುಧದಿಂದ ಪತ್ನಿಯ ಕತ್ತು ಸೀಳಿ, ಆಕೆ ಮೃತಪಟ್ಟಿದ್ದನ್ನು ಖಚಿತಪಡಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

 4 ವರ್ಷದ ಮಗು ಅಂಗನವಾಡಿ ಕೇಂದ್ರಕ್ಕೆ ಹೋಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕೆಲ ಹೊತ್ತಿನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸೌಮ್ಯಳ ಶವವನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT