ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಸ್ಥಾನಕ್ಕೆ ನಾನೂ ಆಕಾಂಕ್ಷಿ: ಉಮೇಶ ಕತ್ತಿ

Last Updated 9 ಆಗಸ್ಟ್ 2022, 4:58 IST
ಅಕ್ಷರ ಗಾತ್ರ

ಮಳವಳ್ಳಿ: ‘2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ. ಆಗ ನನಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ವರಿಷ್ಠರ ಬಳಿ ಮನವಿ ಮಾಡುವೆ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಸಚಿವ ಉಮೇಶ ಕತ್ತಿ ತಿಳಿಸಿದರು.

ತಾಲ್ಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ಹಾಗೂ ಜಲವಿದ್ಯುತ್ ಸ್ಥಾವರವನ್ನು ಸೋಮ ವಾರ ವೀಕ್ಷಿಸಿ ಮಾತನಾಡಿದರು.

‘ನಾನು 8 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಈಗ ಸಚಿವನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಿ ನಾಡಿನ ಜನರ ಸೇವೆ ಮಾಡುವ ಹಂಬಲ ಹೊಂದಿದ್ದೇನೆ’ ಎಂದರು.

‘ಬಿ.ಎಸ್.ಯಡಿಯೂರಪ್ಪ ಬಿಜೆಪಿ ಹಿರಿಯ ನಾಯಕರಾಗಿದ್ದು, ಅವರ ಮಾರ್ಗದರ್ಶನ ನಮಗೆ ಅಗತ್ಯವಿದೆ. ಅವರನ್ನು ಪಕ್ಷ ಎಂದಿಗೂ ಕಡೆಗಣಿ ಸುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಕೇವಲ ಊಹಾಪೋಹ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನು ಎದುರಿಸುತ್ತೇವೆ’ ಎಂದರು.

‘ಬೆಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮೇಕೆದಾಟು ಯೋಜನೆ ಅಗತ್ಯವಿದೆ. ಇದಕ್ಕೆ ತಮಿಳುನಾಡು ಸರ್ಕಾರ ಅವಕಾಶ ಮಾಡಿಕೊಡಬೇಕು’ ಎಂದು ಹೇಳಿದರು.

‘ರಾಜ್ಯದಲ್ಲಿ 9.94 ಲಕ್ಷ ಹೆಕ್ಟೇರ್ ಡೀಮ್ಡ್ ಅರಣ್ಯ ಪ್ರದೇಶವಿದ್ದು, ಈ ಪೈಕಿ 3.30ಲಕ್ಷ ಹೆಕ್ಟೇರ್ ಡೀಮ್ಡ್ ಅರಣ್ಯ ಪ್ರದೇಶವನ್ನು ಅರಣ್ಯ ಇಲಾಖೆ ವ್ಯಾಪ್ತಿಗೆ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಇನ್ನುಳಿದ 6.60 ಲಕ್ಷ ಹೆಕ್ಟೇರ್ ಡೀಮ್ಡ್ ಪ್ರದೇಶವನ್ನು ಕಂದಾಯ ಇಲಾಖೆಗೆ ನೀಡಲು ಮುಂದಾಗಿದ್ದೇವೆ’ ಎಂದರು.

ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಯು.ಪಿ.ಸಿಂಗ್, ಉಪ ಸಂರಕ್ಷಣಾ ಅಧಿಕಾರಿಗಳಾದ ನಂದೀಶ್, ವಿ.ಏಡುಕೊಂಡಲು, ಸಂತೋಷ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ನಾಗೇಂದ್ರ ಪ್ರಸಾದ್, ವಲಯ ಅರಣ್ಯಾಧಿಕಾರಿ ಎನ್.ಸಿ.ಮಹದೇವು ಗೌಡ, ಎಂ.ಪಿ.ಕುಮಾರ್, ಯೋಗಾನಂದ್, ಕೆ.ಎಂ.ಮಹದೇವಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT