ಮದ್ದೂರು: ‘ಮೊದಲ ಬಾರಿ ಶಾಸಕನಾಗಿದ್ದೇನೆ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ’ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲ್ಲೂಕಿನ ಕದಲೂರು ಗ್ರಾಮದಲ್ಲಿ ಶನಿವಾರ ₹ 4 ಕೋಟಿ ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿ ಹಾಗೂ ₹ 3 ಕೋಟಿ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆಯನ್ನು ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿ ಅವರು ಮಾತನಾಡಿದರು.

‘ಚಂದ್ರಶೇಖರನಾಥ ಸ್ವಾಮೀಜಿಯವರ ವಿರುದ್ಧ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕೆಲವೊಮ್ಮೆ ಬಾಯಿ ತಪ್ಪಿನಿಂದ ಹೇಳಿಕೆ ನೀಡಿ ಮಾತನಾಡಿರುತ್ತಾರೆ. ಆದರೆ, ಅವೆಲ್ಲದಕ್ಕೂ ಎಫ್ಐಆರ್ ಹಾಕಿಕೊಂಡು ಹೋದರೆ ಆಗಲ್ಲವೆಂದ ಅವರು, ಸ್ವಾಮೀಜಿಗಳು ಉದ್ದೇಶ ಪೂರ್ವಕವಾಗಿ ಮಾತನಾಡಿದ್ದಾರಾ ಇಲ್ಲವೋ ಏನೂ ಅಂತ ಗೊತ್ತಿಲ್ಲ ಅದನ್ನು ಅವರನ್ನೇ ಕೇಳಬೇಕು’ ಎಂದರು.

ಇತ್ತೀಚೆಗೆ ನಡೆದ ಚನ್ನಪಟ್ಟಣ ವಿಧಾನ ಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆತ ರುವಲ್ಲಿ ಹಾಗೂ ಅವರ ಗೆಲುವಿಗೆ ನಿಮ್ಮ ಪಾತ್ರವೂ ಇದೆಯಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ ಅಂತೆಯೇ ಅವರೂ ಶಾಸಕರಾಗಿದ್ದಾರೆ’ ಎಂದರು.

ಆಪರೇಷನ್ ಕಾಂಗ್ರೆಸ್ ಮೂಲಕ ಜೆಡಿಎಸ್ನ ಶಾಸಕರನ್ನು ಸೆಳೆಯುತ್ತೇವೆ ಯೋಗೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅದರ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, ಪಕ್ಷ ಸಂಘಟನೆಯ ವಿಷಯದಲ್ಲಿ ನನ್ನ ಸಹಮತವಿದೆ’ ಎಂದರು.

ಈ ವೇಳೆ ಗ್ರಾ.ಪಂ. ಅಧ್ಯಕ್ಷ ತಿಮ್ಮೆಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವೀಶ್, ಮುಖಂಡರಾದ ಕದಲೂರು ರಾಮಕೃಷ್ಣ, ರವಿ, ನರೇಂದ್ರ, ಸತೀಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.