ಮಂಡ್ಯ: ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಅಭಿಲೇಖಾಲಯದ ದಾಖಲೆಗಳನ್ನು ಅಕ್ರಮವಾಗಿ ತಿದ್ದಿ ಮತ್ತು ಸೃಷ್ಟಿಸಿ, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರಾತಿ ಮಾಡಿದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಸಹಾಯಕ ವಿಜಯಕುಮಾರ್ (ಎ–9) ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ತನಿಖಾಧಿಕಾರಿ ಡಿವೈಎಸ್ಪಿ ಚಲುವರಾಜು ನೇತೃತ್ವದ ತಂಡ ವಿಜಯಕುಮಾರ್ ಅವರನ್ನು ಚಾಮರಾಜನಗರ ಬಳಿ ಬಂಧಿಸಿದ್ದಾರೆ. ನಾಗಮಂಗಲದ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಶಿರಸ್ತೇದಾರರು ಸೇರಿದಂತೆ ಒಟ್ಟು 5 ಸರ್ಕಾರಿ ನೌಕರರನ್ನು ಬಂಧಿಸಲಾಗಿತ್ತು. ಈಗ ಬಂಧಿತರ ಸಂಖ್ಯೆ 6ಕ್ಕೇ ಏರಿದೆ. ತಲೆಮರೆಸಿಕೊಂಡಿರುವ ಉಳಿದ ನಾಲ್ವರು ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಹೆಚ್ಚಿನ ಮಾಹಿತಿ ಕಲೆ ಹಾಕುವ ಉದ್ದೇಶದಿಂದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಜ.19ರಂದು ನ್ಯಾಯಾಧೀಶರನ್ನು ಕೇಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.