ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ: ರೈತಸಂಘ ಆರೋಪ

Published 29 ಜನವರಿ 2024, 14:10 IST
Last Updated 29 ಜನವರಿ 2024, 14:10 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ‘ತಾಲ್ಲೂಕಿನ ವಿವಿಧೆಡೆ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೂ ಅದನ್ನು ತಡೆಯುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ’ ಎಂದು ರೈತ ಸಂಘದ ಕಾರ್ಯಕರ್ತರು ಆರೋಪಿಸಿದರು.

ಪಟ್ಟಣದ ಅರಣ್ಯ ಇಲಾಖೆ ಕಚೇರಿಗೆ ಸೊಮವಾರ ತೆರಳಿ ಅಧಿಕಾರಿಗಳನ್ನು ಪ್ರಶ್ನಿಸಿದರು. ಕಾಳೇನಹಳ್ಳಿ, ಟಿ.ಎಂ. ಹೊಸೂರು ಕಡೆಗಳಲ್ಲಿ ಅರಣ್ಯ ಭೂಮಿಯಲ್ಲಿ ಕಲ್ಲು ಗಣಿಗಾರಿಕೆ ಅಡೆ ತಡೆಯಿಲ್ಲದೆ ನಡೆಯುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿಷಯ ಗೊತ್ತಿದ್ದರೂ ಕ್ರಮ ಕೈಗೊಳ್ಳಲು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ರೈತ ಸಂಘದ ಗೌರವಾಧ್ಯಕ್ಷ ಬಿ.ಎಸ್‌. ರಮೇಶ್‌ ದೂರಿದರು.

ಸಾಮಾಜಿಕ ಅರಣ್ಯ ವಿಭಾಗದಿಂದ ಕೆಲವೆಡೆ ಗಿಡಗಳನ್ನು ನೆಟ್ಟಿದ್ದು, ಸರಿಯಾಗಿ ಪೋಷಣೆ ಮಾಡದ ಕಾರಣ ಶೇ 70ರಷ್ಟು ಗಿಡಗಳು ಒಣಗಿವೆ. ಅರಣ್ಯ ಇಲಾಖೆಯ ಹಣ ವ್ಯರ್ಥವಾಗುತ್ತಿದೆ. ಮೇಲಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದರು.

ಅರಣ್ಯ ಇಲಾಖೆ ಅಧಿಕಾರಿಗಳು ಕಚೇರಿಯಲ್ಲಿ ಸಾರ್ವಜನಿಕರ ಸಂಪರ್ಕಕ್ಕೆ ಸಿಗುತ್ತಿಲ್ಲ. ಸರಿಯಾಗಿ ಮಾಹಿತಿಯನ್ನೂ ನೀಡುತ್ತಿಲ್ಲ. ಸಬೂಬು ಹೇಳುತ್ತಿದ್ದಾರೆ ಎಂದು ಮುಖಂಡ ಎಂ.ಶೆಟ್ಟಹಳ್ಳಿ ಪುರುಷೋತ್ತಮ ಅಸಮಾಧಾನ ವ್ಯಕ್ತಪಡಿಸಿದರು.

ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ಇದುವರೆಗೆ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಸಾಮಾಜಿಕ ಅರಣ್ಯ ವಿಭಾಗದಿಂದ ನೆಟ್ಟಿರುವ ಗಿಡಗಳ ಪೋಷಣೆಗೆ ಕ್ರಮ ವಹಿಸಲಾಗುವುದು ಎಂದು ಉಪ ವಲಯ ಅರಣ್ಯಾಧಿಕಾರಿ ಬಿ.ಎಂ. ನಾಗರಾಜು ತಿಳಿಸಿದರು. ರೈತ ಮುಖಂಡರಾದ ಕೂಡಲಕುಪ್ಪೆ ನಾಗರಾಜು, ಮರೀಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT