ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ | ಸ್ವಾತಂತ್ರ್ಯ ದಿನಾಚರಣೆ: ಸಮಿತಿ ರಚನೆಗೆ ಸೂಚನೆ

Published 3 ಆಗಸ್ಟ್ 2024, 6:25 IST
Last Updated 3 ಆಗಸ್ಟ್ 2024, 6:25 IST
ಅಕ್ಷರ ಗಾತ್ರ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಆ.15ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ವೈಭವಯುತವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನಾಚರಣೆಯನ್ನು ಯಾವುದೇ ಲೋಪವಿಲ್ಲದಂತೆ ಆಚರಿಸಲು ಸ್ವಾಗತ, ವೇದಿಕೆ, ಸಾಂಸ್ಕೃತಿಕ, ವಸ್ತು ಪ್ರದರ್ಶನ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿ, ಸಮಿತಿಗಳು ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸೂಚನೆ ನೀಡಿದರು‌.

ಸಾಂಸ್ಕೃತಿಕ ಕಾರ್ಯಕ್ತಮ ಪ್ರತಿ ಬಾರಿ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ಈ ಬಾರಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡು ಉತ್ತಮವಾದ ದೇಶಭಕ್ತಿ ಕಾರ್ಯಕ್ರಮಗಳನ್ನು ನೀಡುವಂತೆ ತಿಳಿಸಿದರು.

ಸರ್ಕಾರದ ಆದೇಶದ ಮೇರೆಗೆ ಕಡ್ಡಾಯವಾಗಿ ಎಲ್ಲಾ ಸರ್ಕಾರಿ ಶಾಲಾ, ಕಾಲೇಜು, ಕಚೇರಿಗಳಲ್ಲಿ ಧ್ವಜಾರೋಹಣ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಬೇಕು ಎಂದರು.

ವಸ್ತುಪ್ರದರ್ಶನ ಮಳಿಗೆ: ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಎಲ್ ನಾಗರಾಜ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಬಂದಂತಹ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಲು ವಸ್ತುಪ್ರದರ್ಶನ ಮಳಿಗೆಯನ್ನು ತೆರೆಯಬೇಕು ಎಂದರು.

ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಎನ್. ಆರ್.ಎಲ್.ಎಂ ವಿಭಾಗ ಸೇರಿದಂತೆ ವಸ್ತು ಪ್ರದರ್ಶನ ಮಳಿಗೆಯನ್ನು ತೆರೆಯಿರಿ ಎಂದು ಹೇಳಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಎಂ.ಶಿವಮೂರ್ತಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್, ಉಪ ಕಾರ್ಯದರ್ಶಿ ಎಮ್.ಬಾಬು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಚೆಲುವಯ್ಯ, ನಗರಸಭೆ ಆಯುಕ್ತ ಆರ್.ಮಂಜುನಾಥ್, ಆಯುಷ್ ವೈದ್ಯಾಧಿಕಾರಿ ಡಾ.ಬಿ.ಎಸ್. ಸೀತಾಲಕ್ಷ್ಮಿ, ತಹಶೀಲ್ದಾರ್ ಶಿವಕುಮಾರ್ ಬಿರಾದಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್. ಶಿವರಾಮೇಗೌಡ ಇದ್ದರು. 

30 ತಂಡಗಳಿಂದ ಪಥ ಸಂಚಲನ

ಈ ಬಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು ಸುಮಾರು 30 ತಂಡಗಳ ಪಥ ಸಂಚಲನವನ್ನು ಆಯೋಜಿಸುವುದು ಸೂಕ್ತ‌ ಪೊಲೀಸ್ ಇಲಾಖೆ ಗೃಹ ರಕ್ಷಕ ದಳ ಸ್ಕೌಟ್ಸ್ ಅಂಡ್ ಗೈಡ್ಸ್ ರೋವರ್ಸ್ ಅಂಡ್ ರೇಂಜರ್ಸ್ ಎನ್.ಸಿ.ಸಿ ಎನ್.ಎಸ್.ಎಸ್ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 30ಕ್ಕಿಂತ ಹೆಚ್ಚು ಗುಂಪುಗಳಿಂದ ಪಥ ಸಂಚಲನ ನಡೆಸುವಂತೆ ಜಿಲ್ಲಾಧಿಕಾರಿ ಕುಮಾರ ತಿಳಿಸಿದರು. ದೀಪಾಲಂಕಾರ ಸರ್ಕಾರಿ ಕಚೇರಿಗಳು ಮುಖ್ಯ ರಸ್ತೆಯಲ್ಲಿರುವ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಆಗಸ್ಟ್ 14ರಂದು ರಾತ್ರಿಯಿಂದ ದೀಪಾಲಂಕಾರ ಮಾಡಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡುವಂತೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT