ಮಂಡ್ಯ: ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಏಕಕಾಲದಲ್ಲಿ ಗರಿಷ್ಠ ಸಂಖ್ಯೆಯ ರಂಗೋಲಿಗಳನ್ನು ಬಿಡಿಸಿ ದಾಖಲೆ ನಿರ್ಮಿಸಿದ ಮದ್ದೂರು ತಾಲ್ಲೂಕು ಅಣ್ಣೂರು ಗ್ರಾಮ ಪಂಚಾಯತ್ ಸಾಧನೆ 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ಸೇರ್ಪಡೆ ಆಗಿದೆ.

‘ಮಹಿಳಾ ಸಶಕ್ತಿಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ’ಯನ್ನು ಉತ್ತೇಜಿಸುವ ಸಲುವಾಗಿ 2025ರ ಏಪ್ರಿಲ್ 27ರಂದು ರಂಗೋಲಿ ರಚಿಸುವ ಚಟುವಟಿಕೆಯನ್ನು ಅಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಏಕಕಾಲದಲ್ಲಿ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಗ್ರಾ.ಪಂ. ವ್ಯಾಪ್ತಿಯ ಅಣ್ಣೂರು, ಆಳಭುಜನಹಳ್ಳಿ ಮತ್ತು ಕಾರ್ಕಳ್ಳಿ ಗ್ರಾಮಗಳಿಂದ ಒಟ್ಟು 1,544 ಮಂದಿ ಭಾಗವಹಿಸಿದ್ದರು. ಅಕ್ಕಿ ಹಿಟ್ಟು, ಅರಿಶಿನ ಪುಡಿ ಮತ್ತು ಬಣ್ಣದ ಮರಳಿನಂತಹ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಒಟ್ಟಾರೆ 1,418 ರಂಗೋಲಿಗಳನ್ನು ರಚಿಸಿ ಗಮನ ಸೆಳೆದಿದ್ದರು.

‘ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಯಿಂದ ಈ ಸಾಧನೆ ಆಗಿರುವುದಕ್ಕೆ ಹೆಚ್ಚು ಖುಷಿಯಾಗಿದೆ. ಇದ್ದಕ್ಕೆ, ಹಿರಿಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರು ಮತ್ತು ಆಡಳಿತ ಮಂಡಳಿ ಸಹಕಾರವೇ ಕಾರಣ’ ಎನ್ನುತ್ತಾರೆ ಪಿಡಿಒ ಅಶ್ವಿನಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.