‘ರೈತರಿಗೆ ಈ ಕಾಂಗ್ರೆಸ್ ಸರ್ಕಾರ ಸರಣಿ ಅನ್ಯಾಯ ಮಾಡಿದೆ. ಬೆಳೆ ಬೆಳೆದ ರೈತರನ್ನು ಇವರು ಕಾಪಾಡಿದ್ದಾರಾ? ಕೇಂದ್ರ ಸರ್ಕಾರ ಅನುಮತಿ ಕೊಟ್ಟ ಮಾನದಂಡದಲ್ಲಿ ಎಷ್ಟು ಬೆಳೆ ಖರೀದಿ ಮಾಡಿದ್ದೀರಿ ಎಂಬುದನ್ನು ಹೇಳಲಿ? ಮಾವಿನ ಬೆಲೆ ಕುಸಿದಾಗ ಕೇಂದ್ರ ಸರ್ಕಾರದ ಮುಂದೆ ಇವರು ಅರ್ಜಿ ಹಿಡಿದುಕೊಂಡು ಹೋಗಿದ್ದರು. ನಾನು ಸಿಎಂ ಆಗಿದ್ದಾಗ ಮಾವು ಬೆಲೆ ಕುಸಿದಾಗ ರಾಜ್ಯ ಸರ್ಕಾರದ ವತಿಯಿಂದಲೇ ಹಣ ಕೊಟ್ಟೆ. ಇವರಿಗೆ ಕೆಲಸ ಮಾಡಲು ಆಗುತ್ತಿಲ್ಲ ಆದರೆ ಕೇಂದ್ರವನ್ನು ನಿಂದಿಸಲು ನೆಪ ಹುಡುಕುತ್ತಾರೆ’ ಎಂದು ಎಚ್‌ಡಿಕೆ ಕಟುವಾಗಿ ಟೀಕಿಸಿದರು.