ಕೆ.ಆರ್. ಪೇಟೆ: ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ದೇಶದ ಮೇಲೆ ಯುದ್ಧ ಸಾರಿರುವ ಹಿನ್ನಲೆಯಲ್ಲಿ ದುಬೈಗೆ ಖಾಸಗಿ ಪ್ರವಾಸಕ್ಕೆ ತೆರಳಿದ್ದ ತಾಲ್ಲೂಕಿನ ಮನ್ಮುಲ್ ನಿರ್ದೇಶಕ ಡಾಲು ರವಿ ಭಾರತಕ್ಕೆ ಮರಳಲಾಗದೆ ದುಬೈನಲ್ಲಿ ಉಳಿದಿದ್ದಾರೆ.

ತಮ್ಮ ಬೆಂಬಲಿಗರಿಗೆ ಸಂದೇಶ ಕಳುಹಿಸಿರುವ ಅವರು, ದುಬೈ ಮೇಲೆ ಇರಾನ್ ದಾಳಿ ನಡೆಸಿರುವುದರಿಂದ ಯುದ್ಧದ ಕಾರ್ಮೋಡವಿದೆ. ಆದರೆ ನಾನು ತಂಗಿರುವ ಹೋಟೆಲ್ ಸುರಕ್ಷಿತವಾಗಿದ್ದು ಯಾವುದೇ ತೊದರೆ ಆಗಿಲ್ಲ. ಎಲ್ಲವೂ ಸರಿಯಾಗಿದ್ದರೆ ಭಾನುವಾರ ಭಾರತಕ್ಕೆ ಮರಳಬೇಕಿತ್ತು. ಆದರೆ ದುಬೈನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ಎಲ್ಲಾ ವಿಮಾನಗಳು ಹಾರಾಟ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ವಾಪಸ್ ಆಗಲು ಸಾಧ್ಯವಾಗಿಲ್ಲ. ನಾನು ಸುರಕ್ಷಿತವಾಗಿದ್ದು ಆತಂಕಪಡುವ ಅಗತ್ಯವಿಲ್ಲವೆಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.