ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೊ ಅಧ್ಯಕ್ಷ ಎಸ್‌. ಸೋಮನಾಥ್‌ಗೆ ‘ವಿಜ್ಞಾತಂ’ ಪ್ರಶಸ್ತಿ

Published 13 ಫೆಬ್ರುವರಿ 2024, 13:49 IST
Last Updated 13 ಫೆಬ್ರುವರಿ 2024, 13:49 IST
ಅಕ್ಷರ ಗಾತ್ರ

ನಾಗಮಂಗಲ (ಮಂಡ್ಯ): ತಾಲ್ಲೂಕಿನ ಆದಿಚುಂಚನಗಿರಿ ಮಠದಿಂದ ಕೊಡಮಾಡುವ 2024ನೇ ಸಾಲಿನ ‘ವಿಜ್ಞಾತಂ’ ರಾಷ್ಟ್ರೀಯ ಪ್ರಶಸ್ತಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ)ಯ ಅಧ್ಯಕ್ಷ ಎಸ್‌.ಸೋಮನಾಥ್‌ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಫೆ.20ರಂದು ನಡೆಯುವ ಸಮಾರಂಭದಲ್ಲಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡುವರು.

ಫೆ.19 ಹಾಗೂ 20ರಂದು ಜ್ಞಾನ–ವಿಜ್ಞಾನ–ತಂತ್ರಜ್ಞಾನ ಮೇಳ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿ ಅವರ 11ನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವ ನಡೆಯಲಿದೆ. ಫೆ.19ರಂದು ವಸ್ತುಪ್ರದರ್ಶನ ಹಾಗೂ ವಿಶೇಷ ಉಪನ್ಯಾಸ  ಆಯೋಜಿಸಲಾಗಿದ್ದು, ಹೃದ್ರೋಗ ತಜ್ಞ ಡಾ.ಸಿ.ಎನ್‌.ಮಂಜುನಾಥ್‌, ಐಐಎಸ್‌ಸಿಯ ಕೆ.ಜೆ.ವಿನೋಯ್‌ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌, ಜೆಡಿಎಸ್‌ ನಾಯಕರಾದ ಸಿ.ಎಸ್‌.ಪುಟ್ಟರಾಜು, ಕೆ.ಸುರೇಶ್‌ಗೌಡ ಪಾಲ್ಗೊಳ್ಳುವರು.

ಫೆ.20ರಂದು ಪಟ್ಟಾಭಿಷೇಕ ಮಹೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಹರಿಯಾಣ ರೋಹ್ಟಕ್‌ನ ಬಾಬಾ ಮಸ್ತ್‌ನಾಥ ವಿಶ್ವವಿದ್ಯಾಲಯದ ಕುಲಪತಿ ಹಾಗೂ ರಾಜಸ್ಥಾನದ ತಿಜಾರ ಕ್ಷೇತ್ರದ ಶಾಸಕ ಮಹಾಂತ ಬಾಲಕನಾಥ ಯೋಗಿ, ಗುಜರಾತ್‌, ರಾಜ್‌ಕೋಟ್‌ನ ಆರ್ಶ್‌ ವಿದ್ಯಾಮಂದಿರದ ಸ್ವಾಮಿ ಪರಮಾತ್ಮಾನಂದ ಸರಸ್ವತಿ ಸಾನ್ನಿಧ್ಯ ವಹಿಸಲಿದ್ದಾರೆ.

ಅತಿಥಿಗಳಾಗಿ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ, ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ, ಅಕಾಡೆಮಿ ಫಾರ್‌ ಕ್ರಿಯೇಟಿವ್‌ ಟೀಚಿಂಗ್‌ ಅಧ್ಯಕ್ಷ ಗುರುರಾಜ್‌ ಕರ್ಜಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT