ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗಾರಿಕಾ ನಿಯಮಗಳ ಸರಳೀಕರಣ: ಶೆಟ್ಟರ್‌

Last Updated 2 ಮಾರ್ಚ್ 2021, 14:26 IST
ಅಕ್ಷರ ಗಾತ್ರ

ಮಂಡ್ಯ: ‘ಉದ್ಯಮಿಗಳು ಯಾವುದೇ ಹೊಸ ಯೋಜನೆಗಳಿಗೆ ಅನುಮತಿ ಪಡೆಯಲು ಹೆಚ್ಚು ದಿನ ಕಾಯಬೇಕಿಲ್ಲ. ಹೊಸ ಕೈಗಾರಿಕಾ ನೀತಿ ಅನ್ವಯ ಆದಷ್ಟು ಬೇಗ ತಮ್ಮ ಯೋಜನೆಗಳಿಗೆ ಸರ್ಕಾರದ ಅನುಮತಿ ಪಡೆಯಬಹುದಾಗಿದೆ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಮಂಗಳವಾರ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಿರಾಪೇಕ್ಷಣ ಪತ್ರ, ಘಟಕಗಳ ವಿಸ್ತರಣೆಗೆ ಬಹಳ ಬೇಗ ಅನುಮತಿ ದೊರೆಯಲಿವೆ. ಕಚೇರಿಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ಸ್ವಯಂ ಘೋಷಣೆಯೊಂದಿಗೆ ಅಫಿಡವಿಟ್‌ ಸಲ್ಲಿಸಿ ಕಾಮಗಾರಿ ಆರಂಭಿಸಬಹುದು. ಕೈಗಾರಿಕಾ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು ಹೊಸ ಬದಲಾವಣೆಗಳನ್ನು ಅರಿತು ಸದುಪಯೋಗ ಮಾಡಿಕೊಳ್ಳಬೇಕು’ ಎಂದರು.

‘ಉದ್ಯಮಿಗಳ ಸಮಸ್ಯೆ ಬಗೆಹರಿಸಲು ಪ್ರತಿ ತಿಂಗಳು ರಾಜ್ಯಮಟ್ಟದಲ್ಲಿ ಸಭೆ ನಡೆಯುತ್ತಿದೆ. ಅದೇ ರೀತಿ ಜಿಲ್ಲಾ ಮಟ್ಟದಲ್ಲೂ ಪ್ರತಿ ತಿಂಗಳು ಸಭೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಕೈಗಾರಿಕೆಗಳನ್ನು ಬೆಂಗಳೂರು ಕೇಂದ್ರಿತಗೊಳಿಸದೆ 2, 3ನೇ ಶ್ರೇಣಿಯ ನಗರಗಳಿಗೂ ಸ್ಥಳಾಂತರ ಮಾಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT