ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಗದ್ದೆ ನಾಟಿ ಮಾಡಿ, ಬೆಲ್ಲ ಸವಿದ ಶೋಭಾ ಕರಂದ್ಲಾಜೆ

Last Updated 16 ಆಗಸ್ಟ್ 2021, 8:28 IST
ಅಕ್ಷರ ಗಾತ್ರ

ಮಂಡ್ಯ: ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೋಮವಾರ ತಾಲ್ಲೂಕಿನ ಹೊನಗನಹಳ್ಳಿಯಲ್ಲಿ ಗದ್ದೆನಾಟಿ ಮಾಡಿ ಗಮನ ಸೆಳೆದರು.

ರೈತ ಮಹಿಳೆಯರ ಜೊತೆ ಗದ್ದೆಗೆ ಇಳಿದ ಶೋಭಾ ನಾಟಿ ಮಾಡಿ ಗಮನ ಸೆಳೆದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಜೊತೆ ಟ್ರ್ಯಾಕ್ಟರ್‌ ಏರಿ ನಾಟಿ ಯಂತ್ರದ ಮೂಲಕವೂ ನಾಟಿ ಮಾಡಿದರು. ನಂತರ ಸಾತನೂರು ಗ್ರಾಮದ ಆಲೆಮನೆಗೆ ತೆರಳಿ ಬೆಲ್ಲ ತಯಾರಾಗುವ ಪ್ರಕ್ರಿಯೆ ವೀಕ್ಷಿಸಿದರು. ಕ್ರಷರ್‌ಗೆ ಕಬ್ಬು ಕೊಟ್ಟರು, ಬೆಲ್ಲದ ರುಚಿ ಸವಿದರು.

ಶೋಭಾ ಕರಂದ್ಲಾಜೆ ಗದ್ದೆಗೆ ಇಳಿದು ನಾಟಿ ಮಾಡಿದರು
ಶೋಭಾ ಕರಂದ್ಲಾಜೆ ಗದ್ದೆಗೆ ಇಳಿದು ನಾಟಿ ಮಾಡಿದರು

‘ರಾಸಾಯನಿಕ ಬೆಲ್ಲ ತಯಾರಿಕೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಬೆಲ್ಲ ತಯಾರಿಕೆಯಲ್ಲಿ ರಾಸಾಯನಿಕ ಬೆರೆಸಬಾರದು, ಕಲಬೆರಕೆ ಮಾಡಬಾರದು ಎಂದು ಸಲಹೆ ನೀಡಿದ್ದೇನೆ’ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

ಶೋಭಾ ಅವರು ಮದ್ದೂರು ತಾಲ್ಲೂಕು ನಿಡಘಟ್ಟದಿಂದ ಇಂದು ಜನಾಶೀರ್ವಾದ ಯಾತ್ರೆ ಆರಂಭಿಸಿದರು. ರುದ್ರಾಕ್ಷಿಪುರ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿಗೆ ತೆರಳಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT