ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ನೀಡುವ ಎರಡನೇ ವರ್ಷದ ‘ಪ್ರೊ.ಬಿ. ಜಯಪ್ರಕಾಶಗೌಡ ಪ್ರಶಸ್ತಿ–2026’ಗೆ ರಂಗ ಸಂಘಟಕ ಶ್ರೀನಿವಾಸ್ ಜಿ. ಕಪ್ಪಣ್ಣ ಹಾಗೂ ರಂಗಕರ್ಮಿ ಶಶಿಧರ ಭಾರಿಘಾಟ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹50 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದ್ದು, ಮಾರ್ಚ್ 6ರಂದು ಸಂಜೆ 5.30ಕ್ಕೆ ನಗರದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಕೊಮ್ಮೇರಹಳ್ಳಿ ವಿಶ್ವಮಾನವ ಕ್ಷೇತ್ರದ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಉದ್ಯಮಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅಧ್ಯಕ್ಷತೆ ವಹಿಸಲಿದ್ದಾರೆ.

ಆಂಧ್ರಪ್ರದೇಶದ ತೆರಿಗೆ ಇಲಾಖೆ ಮುಖ್ಯ ಆಯುಕ್ತ ಜಯರಾಮ್ ರಾಯಪುರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೊ.ಜಯಪ್ರಕಾಶಗೌಡ ದಂಪತಿ ಉಪಸ್ಥಿತರಿರಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.